ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಅಪರಂಜಿ 2.0 ಚಿಣ್ಣರ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭ

ಕಿರಿಮಂಜೇಶ್ವರ: ಎಪ್ರಿಲ್ 15 ರಂದು ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಚಿಣ್ಣರ ಬೇಸಿಗೆ ಶಿಬಿರ ಅಪರಂಜಿ 2.0 ಉದ್ಘಾಟನಾ ಸಮಾರಂಭವು ವಿಜೃಂಭಣೆಯಿಂದ ನೆರವೇರಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಗಣೇಶ್ ಮೊಗವೀರ ಅವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಕರಾವಳಿ ಭಾಗದಲ್ಲಿ ಮರೀಚಿಕೆಯಾಗಿ ರುವ ಆಂಗ್ಲ ಭಾಷಾ ಸಂವಹನ ಕೌಶಲ್ಯ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ಅಣಿಗೊಳಿಸುವುದು ನಮ್ಮ ಶಿಕ್ಷಣ ಸಂಸ್ಥೆಯ ಗುರಿಯಾಗಿದೆ. ಪ್ರತಿಯೊರ್ವ ಶಿಬಿರಾರ್ಥಿಯು ಇದರ […]