ಆರಂಭಿಕರ ಎಲೈಟ್ ಪಟ್ಟಿಯಲ್ಲಿ ಕಿಶನ್ ನಂ.1: ಸಚಿನ್ ತೆಂಡೂಲ್ಕರ್ ದಾಖಲೆ ಮುರಿದ ಇಶಾನ್.

ಬಾರ್ಬಡೋಸ್ (ವೆಸ್ಟ್ ಇಂಡೀಸ್):ಸದ್ಯ ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ಭಾರತ ತಂಡದಲ್ಲಿ ವಿಕೆಟ್ ಕೀಪರ್ ಕಮ್ ಬ್ಯಾಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಏಕದಿನ ಸರಣಿಯ ಮೊದಲೆರಡು ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದ ಕಿಶನ್ ಉತ್ತಮ ಲಯದಲ್ಲಿ ಬ್ಯಾಟಿಂಗ್ ಮಾಡಿದ್ದಾರೆ. ನಿನ್ನೆ ನಡೆದ ಪಂದ್ಯದಲ್ಲಿ ಅರ್ಧಶತಕ ದಾಖಲಿಸಿದ ಕಿಶನ್ ಸಚಿನ್ ದಾಖಲೆಯನ್ನು ಮುರಿದರು. ಭಾರತ ಕ್ರಿಕೆಟ್ ತಂಡದ ಫ್ಯೂಚರ್ ಸ್ಟಾರ್ ಆಟಗಾರರ ಪಟ್ಟಿಯಲ್ಲಿ ಇಶಾನ್ ಕಿಶನ್ ಸಹ ಒಬ್ಬರು.ಕ್ರಿಕೆಟ್ ದೇವರು ಎಂದೇ ಕರೆಸಿಕೊಳ್ಳುವ ಸಚಿನ್ ತೆಂಡೂಲ್ಕರ್ ಅವರು ಮಾಡಿದ್ದ ದಾಖಲೆಯನ್ನು ಯುವ ಆಟಗಾರ […]