ಕೇರಳ ಮಾದರಿ ಕರ್ನಾಟಕದಲ್ಲೂ ರಬ್ಬರಿಗೆ ಬೆಂಬಲ ಬೆಲೆ ಘೋಷಿಸಿ: ಮುಖ್ಯಮಂತ್ರಿಗಳಿಗೆ ಕ್ಯಾಂಪ್ಕೋ ಮನವಿ
ಮಂಗಳೂರು: ಕರ್ನಾಟಕ ಸರಕಾರವು ಕೇರಳ ಸರಕಾರದ ಮಾದರಿಯಲ್ಲೇ ರಬ್ಬರಿಗೆ ಬೆಂಬಲ ಬೆಲೆ ಘೋಷಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಕ್ಯಾಂಪ್ಕೋ ಮನವಿ ಮಾಡಿದೆ. ರಾಜ್ಯದ ಮಲೆನಾಡು ಮತ್ತು ಕರಾವಳಿ ಭಾಗದ ಹೆಚ್ಚಿನ ರೈತರು ತಮ್ಮ ಜೀವನಾಧಾರಕ್ಕೆ ಅಡಿಕೆಯೊಂದಿಗೆ ರಬ್ಬರ್ ಕೃಷಿಯನ್ನು ಅವಲಂಬಿಸಿದ್ದಾರೆ. ರಬ್ಬರಿನ ಪರ್ಯಾಯ ಕೃಷಿಯಿಂದ ರೈತರು ಆರ್ಥಿಕ ಸ್ವಾವಲಂಬನೆ ಸಾಧಿಸಲು ಸಾಧ್ಯವಾಗಿದೆ. ಇತ್ತೀಚಿನ ರಬ್ಬರ್ ಮಾರುಕಟ್ಟೆಯಲ್ಲಿ ಉಂಟಾದ ದರ ಕುಸಿತವು ಕೃಷಿಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪರಿಹಾರವಿಲ್ಲದೆ ರಬ್ಬರ್ ಮರಗಳನ್ನು ಕಡಿಯುವ ನಿರ್ಧಾರ ಮಾಡಿದ್ದಾರೆ ಎಂದು ಮನವಿಯಲ್ಲಿ ವಿವರಿಸಲಾಗಿದೆ. […]