ಕಿಶೋರ ಯಕ್ಷಗಾನ ಸಂಭ್ರಮ ಸಮಾರೋಪ ಸಮಾರಂಭ
ಉಡುಪಿ: ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಎರಡು ವಾರಗಳ ಪರ್ಯಂತ ನಡೆದ ಕಿಶೋರ ಯಕ್ಷಗಾನ ಸಂಭ್ರಮದ ಸಮಾರೋಪ ಸಮಾರಂಭ ರಾಜಾಂಗಣದಲ್ಲಿ ನಡೆಯಿತು. 28 ಶಾಲೆಗಳ ಸುಮಾರು 860 ವಿದ್ಯಾರ್ಥಿಗಳು ಕಿಶೋರ ಯಕ್ಷಗಾನ ಸಂಭ್ರಮದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಸ್ವಾಮೀಜಿ, ಈ ಕಲೆ ಮಕ್ಕಳನ್ನು ಸಂಸ್ಕೃತಿ ಸಂಪನ್ನರಾಗಿಸುವಲ್ಲಿ ಮಹತ್ತ್ವದ ಪಾತ್ರ ವಹಿಸಿದೆ. ಯಕ್ಷ ಶಿಕ್ಷಣ ಟ್ರಸ್ಟ್ ಇದನ್ನು ನಿರಂತರ ಮುಂದುವರಿಸಿಕೊಂಡು ಬರಲಿ ಎಂದು ಆಶೀರ್ವದಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಸಕಯಶ್‍ಪಾಲ್ ಎ. […]
ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಡಾ.ಎಚ್.ಎಸ್.ಶೆಟ್ಟಿ ಇವರಿಗೆ ಗೌರವಾಭಿನಂದನೆ
ಉಡುಪಿ: ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ,ಬೆಂಗಳೂರು, ಯಕ್ಷಗಾನ ಕಲಾರಂಗ(ರಿ) ಉಡುಪಿ, ಯಕ್ಷಶಿಕ್ಷಣ ಟ್ರಸ್ಟ್(ರಿ) ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ, ಕಿಶೋರ ಯಕ್ಷಗಾನ ಸಂಭ್ರಮ- 2023 ದ ಕಾರ್ಯಕ್ರಮದ ಸಂದರ್ಭದಲ್ಲಿ, ಯಕ್ಷಶಿಕ್ಷಣ ಟ್ರಸ್ಟ್ ನ ಗೌರವಾಧ್ಯಕ್ಷ ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು, ಶಿಕ್ಷಣ ಕ್ಷೇತ್ರಕ್ಕೆ ಉದಾರ ದಾನ ನೀಡಿದ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಡಾ.ಎಚ್.ಎಸ್.ಶೆಟ್ಟಿ ಇವರನ್ನು ಗೌರವಿಸಿ ಅಭಿನಂದಿಸಿದರು. ಸಮಾರಂಭದಲ್ಲಿ ಸ್ಥಾಪಕ ಅಧ್ಯಕ್ಷ ಮಾಜಿ ಶಾಸಕ […]
ಕಿಶೋರ ಯಕ್ಷಗಾನ ಸಂಭ್ರಮ- 2023 ಉದ್ಘಾಟನೆ
ಉಡುಪಿ: ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು,ಯಕ್ಷಗಾನ ಕಲಾರಂಗ(ರಿ) ಉಡುಪಿ, ಯಕ್ಷಶಿಕ್ಷಣ ಟ್ರಸ್ಟ್(ರಿ) ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಕಿಶೋರ ಯಕ್ಷಗಾನ ಸಂಭ್ರಮ- 2023 ದ ಕಾರ್ಯಕ್ರಮವನ್ನು ಯಕ್ಷಶಿಕ್ಷಣ ಟ್ರಸ್ಟ್ ನ ಗೌರವಾಧ್ಯಕ್ಷ, ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ದೀಪ ಬೆಳಗಿಸಿ ಉದ್ಘಾಟಿಸಿದರು. ಕರಾವಳಿಯ ಕಲೆಯಾದ ಯಕ್ಷಗಾನದಲ್ಲಿ ಕುಣಿತ, ಹಾಡುಗಾರಿಕೆ,ಸಂಭಾಷಣೆ ಮತ್ತು ತಾಳ ವಾದ್ಯಗಳಿಂದ ಎಲ್ಲ ರೀತಿಯ ದೈಹಿಕ ಹಾಗೂ ಮಾನಸಿಕವಾಗಿ ಮನರಂಜನೆಯೊಂದಿಗೆ ಬೌದ್ಧಿಕ ವಿಕಸನವಾಗಿ ಮಕ್ಕಳಿಗೆ ನೈತಿಕ ಶಿಕ್ಷಣಕ್ಕೆ […]