ರಜತಾದ್ರಿ: ಅಕ್ಟೋಬರ್ 23 ರಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ
ಉಡುಪಿ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆಯು ಅಕ್ಟೋಬರ್ 23 ರಂದು ಬೆಳಗ್ಗೆ 10 ಗಂಟೆಗೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಜಿಲ್ಲೆಗೆ ಆಗಮಿಸಿದ ಕಿತ್ತೂರು ರಾಣಿ ಚೆನ್ನಮ್ಮ ಜ್ಯೋತಿ
ಉಡುಪಿ: ಐತಿಹಾಸಿಕ ಕಿತ್ತೂರು ರಾಣಿ ಚೆನ್ನಮ್ಮ ಉತ್ಸವವನ್ನು ಈ ಬಾರಿ ರಾಜ್ಯಮಟ್ಟದಲ್ಲಿ ಆಚರಿಸುವ ಹಿನ್ನೆಲೆಯಲ್ಲಿ, ರಾಜ್ಯಾದ್ಯಂತ ಸಂಚರಿಸಲಿರುವ ಕಿತ್ತೂರು ರಾಣಿ ಚೆನ್ನಮ್ಮ ಜ್ಯೋತಿ ಯಾತ್ರೆಯು ಗುರುವಾರ ಉಡುಪಿ ಜಿಲ್ಲೆಗೆ ಆಗಮಿಸಿದ್ದು, ಉಡುಪಿಯ ಜೋಡುಕಟ್ಟೆ ಬಳಿ ಜಿಲ್ಲಾಧಿಕಾರಿ ಕೂರ್ಮಾರಾವ್ ಜ್ಯೋತಿಗೆ ಪೂಜೆ ಸಲ್ಲಿಸಿದರು.