ಅಫ್ಗನ್ ವಿರುದ್ಧ ಕಿವೀಸ್‌ಗೆ ಜಯ; ಭಾರತದ ಟಿ20 ವಿಶ್ವಕಪ್ ಗೆಲ್ಲುವ ಕನಸು ನುಚ್ಚುನೂರು
ಅಬುಧಾಬಿ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾನುವಾರ ಅಬುಧಾಬಿಯಲ್ಲಿ ನಡೆದ ಸೂಪರ್-12 ಹಂತದ ಬಿ ಗುಂಪಿನ ಪಂದ್ಯದಲ್ಲಿ ಅಫ್ಗಾನಿಸ್ತಾನ ವಿರುದ್ಧ ಎಂಟು ವಿಕೆಟ್ ಅಂತರದ ಗೆಲುವು ದಾಖಲಿಸಿರುವ ನ್ಯೂಜಿಲೆಂಡ್ ಸೆಮಿಫೈನಲ್‌ಗೆ ಪ್ರವೇಶಿಸಿದೆ. ಆ ಮೂಲಕ ಭಾರತದ ವಿಶ್ವಕಪ್ ಗೆಲ್ಲುವ ಕನಸು ನುಚ್ಚುನೂರಾಗಿದೆ. ಭಾರತ ಸೆಮಿಫೈನಲ್ ಪ್ರವೇಶಿಸಲು ಕಿವೀಸ್ ವಿರುದ್ಧದ ಪಂದ್ಯದಲ್ಲಿ ಅಫ್ಗನ್ ಗೆಲುವು ದಾಖಲಿಸಬೇಕಿತ್ತು. ಆದರೆ ಅಫ್ಗನ್ ಸೋಲುವುದರೊಂದಿಗೆ ಅಂತಿಮ ನಾಲ್ಕರ ಘಟ್ಟಕ್ಕೆ ತೇರ್ಗಡೆ ಹೊಂದುವಲ್ಲಿ ಭಾರತ ವಿಫಲವಾಗಿದೆ. ಅಫ್ಗನ್ ಮೊದಲು ಬ್ಯಾಟ್ ಮಾಡಿ 125 ರನ್ […]