ಮಣಿಪಾಲ ಕೆಎಂಸಿ ಆಸ್ಪತ್ರೆಯಿಂದ ಹೋಮ್ ಐಸೋಲೇಷನ್, ಆರೈಕೆ ಪ್ಯಾಕೇಜ್ ಕಿಟ್

ಮಣಿಪಾಲ: ಸರ್ಕಾರದ ಮಾರ್ಗಸೂಚಿಯಂತೆ ಮನೆಯಲ್ಲಿಯೇ ಐಸೋಲೇಷನ್ ಆಗುವ ಕೊರೊನಾ ರೋಗಿಗಳು ಮತ್ತು ಕುಟುಂಬ ಸದಸ್ಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ ಹೋಮ್ ಐಸೋಲೇಷನ್ ಆರೈಕೆ ಕಾರ್ಯಕ್ರಮ ಮತ್ತು ಕಿಟ್ ಬಿಡುಗಡೆಗೊಳಿಸಿದೆ. ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಮುಖ್ಯ ನಿರ್ವಣಾಧಿಕಾರಿ ಜಿ ಮುತ್ತಣ ಮತ್ತು ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ ಶೆಟ್ಟಿ  ಮೊದಲ ಕಿಟ್ ಹಸ್ತಾಂತರಿಸುವ ಮೂಲಕ ಯೋಜನೆಗೆ ಚಾಲನೆ ನೀಡಿದರು. ಮಾರುಕಟ್ಟೆ ಮುಖ್ಯಸ್ಥ ಸಚಿನ್ ಕಾರಂತ ಮತ್ತು ಆಪರೇಷನ್ ಮುಖ್ಯಸ್ಥ ಜಿಬು ಥಾಮಸ್ ಉಪಸ್ಥಿತರಿದ್ದರು. ಪ್ಯಾಕೇಜ್ ಕಿಟ್ […]

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಹೊರರೋಗಿ ವಿಭಾಗ ತಾತ್ಕಾಲಿಕ ಸ್ಥಗಿತ

ಮಣಿಪಾಲ: ಕೊರೊನಾ ವೈರಸ್ (ಕೋವಿಡ್ 19) ಹರಡುವುದನ್ನು ತಡೆಗಟ್ಟುವ ಮುನ್ನೆಚ್ಚರಿಕೆಯ ಕ್ರಮವಾಗಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಎಲ್ಲಾ ಹೊರರೋಗಿ ಸೇವೆಯನ್ನು ಜುಲೈ 21ರ ಮಂಗಳವಾರದಿಂದ ಜುಲೈ 26ರ ವರೆಗೆ ಸ್ಥಗಿತಗೊಳಿಸಿದೆ. ಜುಲೈ 27ರಿಂದ ಹೊರರೋಗಿ ವಿಭಾಗವು ಎಂದಿನಂತೆ ಸೇವೆ ಸಲ್ಲಿಸಲಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಕೊರೊನಾ ವೈರಸ್ (ಕೋವಿಡ್ 19) ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿರುವುದು ಮತ್ತು ಕಳೆದ ಕೆಲವು ದಿನಗಳಿಂದ ನಮ್ಮ ಅನೇಕ ಆರೋಗ್ಯ ಕಾರ್ಯಕರ್ತರು […]