ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ರೋಗಿಗಳ ಅನುಕೂಲಕ್ಕಾಗಿ ವಿಡಿಯೋ ಸಮಾಲೋಚನೆ ಸೇವಾ ಸೌಲಭ್ಯ

ಮಣಿಪಾಲ: ಇಲ್ಲಿನ ಕೆಎಂಸಿ ಆಸ್ಪತ್ರೆಯಲ್ಲಿ ಜುಲೈ 20ರ ಸೋಮವಾರದಿಂದ ಜಾರಿಗೆ ಬರುವಂತೆ ರೋಗಿಗಳ ಅನುಕೂಲಕ್ಕಾಗಿ ವಿಡಿಯೋ ಸಮಾಲೋಚನೆ ಸೇವೆಯನ್ನು ಆರಂಭಿಸಲಾಗುತ್ತಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ ಶೆಟ್ಟಿ ತಿಳಿಸಿದ್ದಾರೆ. ಕೊರೊನಾ ವೈರಸ್ (ಕೋವಿಡ್ – 19) ಹರಡುವುದನ್ನು ನಿಯಂತ್ರಿಸುವ ಸಲುವಾಗಿ ಹಲವು ನಿರ್ಬಂಧಗಳಿರುವುದರಿಂದ ನಮ್ಮ ಹೆಚ್ಚಿನ ರೋಗಿಗಳು ವೈದ್ಯರೊಂದಿಗೆ ಸಮಯೋಚಿತ ಸಮಾಲೋಚನೆ ಮತ್ತು ಮರು ಸಮಾಲೋಚನೆಯಿಂದ ವಂಚಿತರಾಗಿದ್ದಾರೆ. ಈ ಸಂಗತಿಯನ್ನು ಅರಿತುಕೊಂಡು, ನಮ್ಮ ರೋಗಿಗಳಿಗೆ ಸಮಾಲೋಚನೆ ಮತ್ತು ಮರು ಸಮಾಲೋಚನೆ ಸೇವೆಯನ್ನು ನೀಡಲು ವಿಡಿಯೋ […]