ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ..

ಮಣಿಪಾಲ: ದಿನಾಂಕ 25 ಏಪ್ರಿಲ್ 2023: 21 ವರ್ಷದ ಶ್ರೀ ಉಲ್ಲಾಸ್ ಆರ್ ಇವರಿಗೆ ಭದ್ರಾವತಿ ತಾಲೂಕಿನ ಚೆನ್ನಗಿರಿ ರಸ್ತೆಯಲ್ಲಿ 22.04.2023ರಂದು ಮದ್ಯಾಹ್ನ 3. 00 ಗಂಟೆಗೆ ರಸ್ತೆ ಅಪಘಾತ ಸಂಭವಿಸಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ದಿನಾಂಕ 23.04.2023ರಂದು ಬೆಳಿಗ್ಗೆ 10. 47 ಕ್ಕೆ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲಕ್ಕೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು . ಭದ್ರಾವತಿ ತಾಲೂಕಿನ ಕೆಂಚನಹಳ್ಳಿ ಗ್ರಾಮ, ನೀರಗುಂಡಿ ಅಂಚೆಯ ಶ್ರೀ ರಾಜಪ್ಪ ಇವರ ಮಗನಾದ ಶ್ರೀ ಉಲ್ಲಾಸ್ ಅವರು ಅಪಘಾತದ ಪರಿಣಾಮದಿಂದ ತೀವ್ರತರವಾದ ಗಾಯವನ್ನು […]