ಕೊಚ್ಚಿ: ದೇಶದ ಪ್ರಪ್ರಥಮ ವಾಟರ್ ಮೆಟ್ರೋಗೆ ಚಾಲನೆ: ಪ್ರವಾಸೋದ್ಯಮಕ್ಕೆ ಉತ್ತೇಜನ

ಕೊಚ್ಚಿ: ಕೇರಳದ ಬಂದರು ನಗರವಾದ ಕೊಚ್ಚಿಯ ಸುತ್ತಲಿನ ಹತ್ತು ಸಣ್ಣ ದ್ವೀಪಗಳನ್ನು ಸಂಪರ್ಕಿಸುವ ದೇಶದ ಮೊದಲ ವಾಟರ್ ಮೆಟ್ರೋಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಚಾಲನೆ ನೀಡಲಿದ್ದಾರೆ. ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ತಯಾರಿಸಿದ ಎಂಟು ಎಲೆಕ್ಟ್ರಿಕ್ ಹೈಬ್ರಿಡ್ ಬೋಟ್‌ಗಳೊಂದಿಗೆ ಮೆಟ್ರೋ ಯೋಜನೆಯು ಪ್ರಾರಂಭವಾಗಲಿದೆ ಎಂದು ವಾಟರ್ ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ. ರೈಲು, ರಸ್ತೆ ಮತ್ತು ನೀರನ್ನು ಸಂಪರ್ಕಿಸುವ ಇಂಟಿಗ್ರೇಟೆಡ್ ಮೆಟ್ರೋ ವ್ಯವಸ್ಥೆಯು ರಾಜ್ಯದ ಅಭಿವೃದ್ದಿಗೆ ವೇಗ ನೀಡಲಿದೆ. ರಸ್ತೆ ಸಾರಿಗೆ ವ್ಯವಸ್ಥೆಯ ಮೇಲಿನ ಒತ್ತಡಗಳನ್ನು ಕಡಿಮೆಗೊಳಿಸಲು ಜಲ […]

ಶಾಲಾ ಬಸ್‌ನಲ್ಲೆ ಬಾಕಿಯಾದ 4 ವರ್ಷದ ಬಾಲಕಿ ಸಾವು: ಪಾರ್ಥಿವ ಶರೀರ ಕೊಚ್ಚಿಗೆ ಆಗಮನ

ಕೊಚ್ಚಿ: ಶಿಶುವಿಹಾರದ ವಿದ್ಯಾರ್ಥಿನಿಯೊಬ್ಬಳು ತನ್ನ ಜನ್ಮದಿನದಂದು ಶಾಲಾ ಬಸ್‌ನಲ್ಲಿ ಶವವಾಗಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ಕತಾರ್‌ನಿಂದ ಬೆಳಕಿಗೆ ಬಂದಿದೆ. ನಾಲ್ಕು ವರ್ಷದ ಮಿನ್ಸಾ ಮರಿಯಮ್ ಜಾಕೋಬ್ ರಾಜಧಾನಿ ದೋಹಾದ ಹೊರವಲಯದಲ್ಲಿರುವ ಅಲ್ ವಕ್ರಾ ಪಟ್ಟಣದ ಸ್ಪ್ರಿಂಗ್‌ಫೀಲ್ಡ್ ಶಿಶುವಿಹಾರದ ವಿದ್ಯಾರ್ಥಿಯಾಗಿದ್ದಳು. ತೆರೆದ ಸ್ಥಳದಲ್ಲಿ ನಿಲ್ಲಿಸಲಾಗಿದ್ದ ಶಾಲಾ ಬಸ್ಸಿನೊಳಗೆ ಮಿನ್ಸಾ ನಿದ್ದೆಗೆ ಜಾರಿದ್ದಳು. ಸುಮಾರು ನಾಲ್ಕು ಗಂಟೆಗಳ ನಂತರ ಬಸ್ಸಿಗೆ ವಾಪಾಸಾದಾಗ ಬಸ್ ಚಾಲಕ ಮತ್ತು ವಾಹನ ಪರಿಚಾರಕರು ಬಾಲಕಿಯನ್ನು ಗಮನಿಸಿದ್ದಾರೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆಕೆಯನ್ನು […]

ಸ್ವದೇಶೀ ನಿರ್ಮಿತ ವಿಮಾನವಾಹಕ ನೌಕೆ ಐ.ಎನ್.ಎಸ್ ವಿಕ್ರಾಂತ್ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ

ಕೊಚ್ಚಿ: ಕೊಚ್ಚಿಯಲ್ಲಿ ಸ್ವದೇಶೀ ನಿರ್ಮಿತ ವಿಮಾನವಾಹಕ ಐ.ಎನ್.ಎಸ್ ವಿಕ್ರಾಂತ್ ಅನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಪ್ರಧಾನಿ ಮೋದಿ, ಭಾರತದ ರಕ್ಷಣಾ ವಲಯವನ್ನು ಸ್ವಾವಲಂಬಿಯನ್ನಾಗಿ ಮಾಡಲು ಸರ್ಕಾರವು ಶ್ರಮಿಸುತ್ತಿದೆ ಎಂಬುದಕ್ಕೆ ಐಎನ್‌ಎಸ್ ವಿಕ್ರಾಂತ್ ಉದಾಹರಣೆಯಾಗಿದೆ ಎಂದರು. ಐ.ಎನ್.ಎಸ್ ವಿಕ್ರಾಂತ್ ಕಾರ್ಯಾರಂಭವು ರಕ್ಷಣಾ ವಲಯದಲ್ಲಿ ಆತ್ಮನಿರ್ಭಾರತದತ್ತ ಮಹತ್ವದ ಹೆಜ್ಜೆಯನ್ನು ಸೂಚಿಸುತ್ತದೆ. ದೇಶವು ಈಗ ವಿಮಾನವಾಹಕ ನೌಕೆಯನ್ನು ವಿನ್ಯಾಸಗೊಳಿಸುವ ಮತ್ತು ನಿರ್ಮಿಸುವ ಸಾಮರ್ಥ್ಯವನ್ನು ಹೊಂದಿರುವ ಬೆರಳೆಣಿಕೆಯ ರಾಷ್ಟ್ರಗಳನ್ನು ಸೇರಿಕೊಂಡಿದೆ. ಪ್ರಧಾನಮಂತ್ರಿಯವರು ಈ ಸಂದರ್ಭದಲ್ಲಿ ಭಾರತೀಯ ನೌಕಾಪಡೆಯ ಹೊಸ ಧ್ವಜವನ್ನು ಅನಾವರಣಗೊಳಿಸಿದರು. ಛತ್ರಪತಿ […]

ದೇಶದ ಮೊದಲ ಸ್ವದೇಶಿ ನಿರ್ಮಿತ ವಿಮಾನವಾಹಕ ನೌಕೆ ಐ.ಎನ್.ಎಸ್ ವಿಕ್ರಾಂತ್ ಲೋಕಾರ್ಪಣೆ ಮಾಡಲಿರುವ ಪ್ರಧಾನಿ ಮೋದಿ

ಕೊಚ್ಚಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಳಗ್ಗೆ ಕೊಚ್ಚಿಯ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ನಲ್ಲಿಸ್ವದೇಶಿ ವಿನ್ಯಾಸ ಮತ್ತು ನಿರ್ಮಿತ ಮೊದಲ ವಿಮಾನವಾಹಕ ನೌಕೆ ಐಎನ್‌ಎಸ್ ವಿಕ್ರಾಂತ್ ಗೆ ಚಾಲನೆ ನೀಡಲಿದ್ದಾರೆ. ಭಾರತೀಯ ನೌಕಾಪಡೆಯ ಆಂತರಿಕ ಯುದ್ಧನೌಕೆ ವಿನ್ಯಾಸ ಕಚೇರಿಯಿಂದ ವಿನ್ಯಾಸಗೊಳಿಸಲ್ಪಟ್ಟಿರುವ ಮತ್ತು ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ನಿಂದ ನಿರ್ಮಿಸಲ್ಪಟ್ಟಿರುವ ಐ.ಎನ್.ಎಸ್ ವಿಕ್ರಾಂತ್ ಅನ್ನು ಅತ್ಯಾಧುನಿಕ ಯಾಂತ್ರೀಕೃತಗೊಂಡ ವೈಶಿಷ್ಟ್ಯಗಳೊಂದಿಗೆ ನಿರ್ಮಿಸಲಾಗಿದೆ ಮತ್ತು ಇದು ಭಾರತದ ಕಡಲ ಇತಿಹಾಸದಲ್ಲಿ ಇದುವರೆಗೆ ನಿರ್ಮಿಸಲಾದ ಅತಿದೊಡ್ಡ ಹಡಗಾಗಿದೆ. ವಿಕ್ರಾಂತ್ ಕಾರ್ಯಾರಂಭದೊಂದಿಗೆ, ಭಾರತವು ಎರಡು ಕಾರ್ಯಾಚರಣೆಯ […]