ಹಲವು ಗಣ್ಯರು ಭಾಗಿ : ಪವಿತ್ರ ಕಾವೇರಿ ತೀರ್ಥೋದ್ಭವ ಕಣ್ತುಂಬಿಕೊಂಡ ಭಕ್ತಗಣ

ಕೊಡಗು : ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಸಾವಿರಾರು ಭಕ್ತರು ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವದ ಕ್ಷಣಕ್ಕೆ ಸಾಕ್ಷಿಯಾದರು.ಕೊಡಗಿನ ಕುಲದೇವಿ, ನಾಡಿನ ಜೀವನದಿ ಕಾವೇರಿ ನಿಗದಿಯಂತೆ ಕರ್ಕಾಟಕ ಲಗ್ನದಲ್ಲಿ ರಾತ್ರಿ 1 ಗಂಟೆ 26 ನಿಮಿಷಕ್ಕೆ ತೀರ್ಥರೂಪಿಣಿಯಾಗಿ ನೆರೆದಿದ್ದ ಭಕ್ತರಿಗೆ ದರ್ಶನ ನೀಡಿದಳು.ಕೊಡಗಿನ ತಲಕಾವೇರಿಯಲ್ಲಿ ಸಾವಿರಾರು ಭಕ್ತರು ಕಾವೇರಿ ತೀರ್ಥೋದ್ಭವವನ್ನು ಕಣ್ತುಂಬಿಕೊಂಡರು. ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್. ಎಸ್. ಬೋಸರಾಜ್, ಶಾಸಕರಾದ ಎ.ಎಸ್. ಪೊನ್ನಣ್ಣ, ಡಾ.ಮಂಥರ್ ಗೌಡ, ಸಂಸದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ ವೆಂಕಟರಾಜ, ಜಿ. […]