ಕೊಡಗಿನಲ್ಲಿ ಧಾರಾಕಾರ ಮಳೆ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಕೊಡಗು: ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ರಜೆ ಘೋಷಿಸಿದ್ದಾರೆ.ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ನಾಳೆ ಬೆಳಗ್ಗೆವರೆಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕಾವೇರಿ ಉಗಮಸ್ಥಾನ ತಲಕಾವೇರಿ ಮತ್ತು ಭಾಗಮಂಡಲದಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಕಾವೇರಿ ನದಿ ನೀರು ಹೆಚ್ಚಳ ಆಗಿರುವುದರಿಂದ ಭಾಗಮಂಡಲ ಮತ್ತು ತಲಕಾವೇರಿ ರಸ್ತೆಯಲ್ಲಿ ನೀರು ನಿಂತಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಧಾರಾಕಾರ ಮಳೆಯಿಂದ ಗುಡ್ಡ ಕುಸಿತ ಸಂಭವಿಸುವ […]