ಕೊಡವೂರು: ಕನಕ ಜಯಂತಿ‌ ಆಚರಣೆ; ದಿವ್ಯಾಂಗ ರಕ್ಷಣಾ ಸಮಿತಿ ಅಂಗವಿಕಲರಿಗೆ ದಿನಸಿ ಕಿಟ್ ವಿತರಣೆ

ಕೊಡವೂರು: ದಿವ್ಯಾಂಗ ರಕ್ಷಣಾ ಸಮಿತಿ ವತಿಯಿಂದ ಕೊಡವೂರು ವಾರ್ಡ್ ನಲ್ಲಿ ಕನಕ ಜಯಂತಿ ಆಚರಿಸಲಾಯಿತು. ಸೇವಾ ಭಾರತಿ ಕನ್ಯಾಡಿ (ಬೆನ್ನು ಮೂಳೆ ಮುರಿತಕ್ಕೆ ಒಳಗಾದವರ ಪುನಶ್ಚೇತನ ಕೇಂದ್ರ) ಇದರ ಅಧ್ಯಕ್ಷ ವಿನಾಯಕ ರಾವ್ ಮಾತನಾಡಿ, ಕೊಡವೂರು ವಾರ್ಡ್ ಸರಕಾರದ ಅನುದಾನ ಹಾಗೂ ಸಂಘಟನೆಗಳ ಸಹಕಾರದೊಂದಿಗೆ 28,92,515 ರೂ. ಸೇವಾ ಕಾರ್ಯಗಳನ್ನು ಮಾಡಿರುವುದು ಶ್ಲಾಘನೀಯ ಎಂದರು. ವಾರ್ಡ್ ನ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಬೇಕೆಂಬ ಉದ್ದೇಶದೊಂದಿಗೆ ಕೊಡವೂರು ವಾರ್ಡ್ ಅಭಿವೃದ್ಧಿ ಸಮಿತಿ ರಚಿಸಿ ಕೃಷಿ, ಅಂಗವಿಕಲರಿಗೆ, ನಿರುದ್ಯೋಗಿಗಳಿಗೆ ಸಹಾಯ ಮಾಡುವುದರೊಂದಿಗೆ […]