ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಮೇಲುಗೈ ಖಚಿತ: ಕೊಡವೂರು

ಉಡುಪಿ: ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸುವ ಮೂಲಕ ಪಕ್ಷದ ಹಿಂದಿನ ಗತವೈಭವನ್ನು ಮರುಕಳಿಸಲಿದೆ ಎಂಬ ವಿಶ್ವಾಸ ನಮಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು ಹೇಳಿದ್ದಾರೆ. ತಳಮಟ್ಟದ ಕಾರ್ಯಕರ್ತರನ್ನು ಸಂಘನಾತ್ಮಕವಾಗಿ ಒಗ್ಗೂಡಿಸಿ ಜನರಿಗೆ ಕಾಂಗ್ರೆಸ್ ಪಕ್ಷದ ಅವಧಿಯಲ್ಲಿ ನೀಡಿದ ಸೌಲಭ್ಯಗಳ ಅರಿವು ಮೂಡಿಸುವ ಪ್ರಯತ್ನ ಸಾಗಿದೆ. ಕಾಂಗ್ರೆಸ್ ನೇತೃತ್ವದ ಸಿದ್ಧರಾಮಯ್ಯ ಸರಕಾರದ ಅವಧಿಯಲ್ಲಿ ಗ್ರಾಮೀಣ ಪ್ರದೇಶಗಳ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಹೆಚ್ಚಿನ ಆದ್ಯತೆ ನೀಡಲಾಗಿತ್ತು. ಬಿ.ಪಿ.ಎಲ್. ಪಡಿತರ […]