ಕೊಡವೂರು: ಮನೆ- ಮನೆಗೆ ತೆರಳಿ ವಿದ್ಯಾರ್ಥಿಗಳಿಗೆ ಗೌರವ ಸಲ್ಲಿಕೆ
ಕೊಡವೂರು ವಾರ್ಡಿನಲ್ಲಿ ಮನೆ – ಮನೆಗೆ ತೆರಳಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸುವ ಕಾರ್ಯ ಮೇ 20 ರಂದು ನಡೆಯಿತು. ಕೊಡವೂರು ವಾರ್ಡಿನಲ್ಲಿ ಅನೇಕ ಸಮಿತಿ ರಚನೆ ಮಾಡಲಾಗಿದ್ದು, ಅದರಲ್ಲಿ ವಿದ್ಯಾರ್ಥಿ ಸಮಿತಿಯೂ ಒಂದಾಗಿದೆ. ವಿದ್ಯಾರ್ಥಿ ಸಮಿತಿಯ ಮುಖಾಂತರ ಅನೇಕ ವಿದ್ಯಾರ್ಥಿಗಳಿಗೆ ಪುಸ್ತಕ, ಬ್ಯಾಗ್ ನೀಡಿ ಅವರ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಕಾರ್ಯ ನಡೆಯುತ್ತಿದ್ದು, ಎಸೆಸೆಲ್ಸಿ ಪರೀಕ್ಷೆಯಲ್ಲಿ ಕೊಡವೂರು ವಾರ್ಡಿಗೆ ಹೆಸರು ತಂದಿರುವ ವಿದ್ಯಾರ್ಥಿಗಳ ಮನೆಗೆ ತೆರಳಿ ಅವರನ್ನು ಗೌರವಿಸುವ ಕಾರ್ಯ ನಡೆಯಿತು. ಈ ಸಂದರ್ಭದಲ್ಲಿ ನಗರ ಸಭಾ […]