ಕೊಕರ್ಣೆ: ಗ್ರಾ.ಪಂವ್ಯಾಪ್ತಿಯ 3 ರಿಂದ 10 ನೇ ವಾರ್ಡ್ ಗಳ ಚುನಾವಣಾ ಪೂರ್ವಭಾವಿ ಸಭೆ

ಕೊಕ್ಕರ್ಣೆ: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಯುಕ್ತ ಉಡುಪಿ ವಿಧಾನಸಭಾ ಕ್ಷೇತ್ರದ ಚುನಾವಣಾ ಪೂರ್ವಭಾವಿ ಸಭೆ ಇಂದು ಕೊಕ್ಕರ್ಣೆ ಗ್ರಾ.ಪಂ ವ್ಯಾಪ್ತಿಯ ಕಾಂಗ್ರೆಸ್ ಮುಖಂಡ ವೆಂಕಟೇಶ್ ಸುವರ್ಣ ಇವರ ಮನೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಪ್ರಸಾದ್ ರಾಜ್ ಕಾಂಚನ್, ತಾ.ಪಂ. ಸದಸ್ಯೆ ಡಾ.ಅನಿತಾ ಶೆಟ್ಟಿ, ಗ್ರಾ.ಪಂ ಸದಸ್ಯ ನರಸಿಂಹ ಪೂಜಾರಿ, ಜಿ.ಪಂ. ಸದಸ್ಯ ಸುಧಾಕರ ಶೆಟ್ಟಿ ಮೇರ್ಮಾಡಿ, ಆನಂದ ಮರಕಾಲ ಮೊದಲಾದವರು ಉಪಸ್ಥಿತರಿದ್ದರು.

ಬ್ರಹ್ಮಾವರ: ಕೃಷಿ ಅಭಿಯಾನ ಕಾರ್ಯಕ್ರಮ

ಉಡುಪಿ, ಜೂನ್ 1: ಉಡುಪಿ ಜಿಲ್ಲಾ ಪಂಚಾಯತ್, ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳ ಸಹಯೋಗದಲ್ಲಿ ಬ್ರಹ್ಮಾವರ ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾರ್ಯಕ್ರಮವು ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ ಎಂಬ ಘೋಷವಾಕ್ಯದಡಿಯಲ್ಲಿ ಜೂನ್ 12 ರಂದು ಬೆಳಗ್ಗೆ 10.30 ಕ್ಕೆ ಕೊಕ್ಕರ್ಣೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಉಡುಪಿ ಶಾಸಕ ಕೆ.ರಘುಪತಿ ಭಟ್ ಉದ್ಘಾಟಿಸಲಿದ್ದು, ಕೊಕ್ಕರ್ಣೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾಲತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.