ಕೋಲ್ಕತಾ: ಹಿಂಸಾಚಾರ ರೂಪಕ್ಕೆ ತಿರುಗಿದ ಬಿಜೆಪಿ ಕಾರ್ಯಕರ್ತರ ಪ್ರತಿಭಟನಾ ಮೆರವಣಿಗೆ

ಕೋಲ್ಕತಾ: ರಾಜ್ಯದಲ್ಲಿ ನಡೆದಂತಹ ಬಿಜೆಪಿ ಮುಖಂಡರ ಹತ್ಯೆ ಖಂಡಿಸಿ ಹಾಗೂ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಇಂದು ಪಶ್ಚಿಮ ಬಂಗಾಳದಲ್ಲಿ ಹಮ್ಮಿಕೊಂಡ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ ತಿರುಗಿದ್ದು, ಕಾರ್ಯಕರ್ತರ ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿದೆ. ಕಾರ್ಯಕರ್ತರು ಪಶ್ಚಿಮ ಬಂಗಾಳ ಸಚಿವಾಲಯದ ಕಡೆಗೆ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದರು. ಆದರೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದಾರೆ. ಇದರಿಂದ ಆಕ್ರೋಶಗೊಂಡ ಕೇಸರಿ ಪಕ್ಷದ ಕಾರ್ಯಕರ್ತರು ಬ್ಯಾರಿಕೇಡ್‌ಗಳನ್ನು ಭೇದಿಸಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ […]