ಕೊಲ್ಲೂರು: ಬಸ್ ಉರುಳಿ 20ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯ

ಬೈಂದೂರು: ಚಾಲಕನ ನಿಯಂತ್ರಣ ತಪ್ಪಿ 42 ಮಂದಿ ಯಾತ್ರಾರ್ಥಿಗಳಿದ್ದ ಬಸ್ ವೊಂದು ಉರುಳಿ ಬಿದ್ದ ಘಟನೆ ಬೈಂದೂರು ತಾಲೂಕಿನ ಕೊಲ್ಲೂರಿನ ಸಮೀಪ ಮಂಗಳವಾರ ಸಂಜೆ ನಡೆದಿದೆ. ಕೋಲಾರ ಜಿಲ್ಲೆಯಿಂದ ಯಾತ್ರಾರ್ಥಿಗಳು ಬಸ್ ನಲ್ಲಿ ಕೊಲ್ಲೂರು ಕ್ಷೇತ್ರಕ್ಕೆ ಆಗಮಿಸುತ್ತಿದ್ದರು. ಈ ವೇಳೆ ಕೊಲ್ಲೂರು ಗ್ರಾಮದ ಸಮೀಪ ಎನ್‌ಎಚ್‌ 76 ರಸ್ತೆಯ ಒಣ್ಕಣ್ ಮೋರಿ ತಿರುವಿನಲ್ಲಿ ನಿನ್ನೆ ಸಂಜೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಇದರ ಪರಿಣಾಮ ಬಸ್ ರಸ್ತೆಯ ಎಡಬದಿಗೆ ಉರುಳಿ ಬಿದ್ದಿದ್ದು, ಘಟನೆಯಲ್ಲಿ 20ಕ್ಕೂ ಅಧಿಕ […]