ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರಾಗಿ ಬಾಬು ಶೆಟ್ಟಿ ಆಯ್ಕೆ

ಕುಂದಾಪುರ: ಕೊಲ್ಲೂರು ಶ್ರೀಮುಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಬಾಬು ಶೆಟ್ಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆಯಾಗಿದ್ದು ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಮೊದಲ ಸಭೆ ಶುಕ್ರವಾರ ನಡೆಯಿತು. ಈ ಸಂದರ್ಭದಲ್ಲಿ ಕುಂದಾಪುರ ಸಹಾಯಕ ಆಯುಕ್ತರಾದ ಮಹೇಶ್ಚಂದ್ರ ಪ್ರಕ್ರಿಯೆ ನಡೆಸಿದರು. ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ವ್ಯವಸ್ಥಾಪನ ಸಮಿತಿ ಸದಸ್ಯರಾದ ಪ್ರಧಾನ ಅರ್ಚಕ ನಿತ್ಯಾನಂದ ಅಡಿಗ, ಮಹಾಲಿಂಗ ವೆಂಕನಾಯ್ಕ್, ಧನಾಕ್ಷಿ, ಸುಧಾ ಕೆ., ಸುರೇಂದ್ರ ಶೆಟ್ಟಿ, ಅಭಿಲಾಷ್ ಪಿ.ವಿ, ಯು. […]