ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ: ಅನ್ನ ಪ್ರಸಾದಕ್ಕೆ ರಾಷ್ಟ್ರೀಯ ಸುರಕ್ಷತಾ ಗುಣಮಟ್ಟದ ಮಾನ್ಯತೆ

ಕೊಲ್ಲೂರು: ರಾಜ್ಯದ ಅತ್ಯಂತ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ರಾಜ್ಯ ಹಾಗೂ ಹೊರ ರಾಜ್ಯದ ಭಕ್ತಾದಿಗಳು ಮಾತ್ರವಲ್ಲದೇ, ವಿದೇಶದಿಂದಲೂ ಭಕ್ತರೂ ಆಗಮಿಸುತ್ತಿದ್ದು, ಶ್ರೀ ಮೂಕಾಂಬಿಕೆಯ ದರ್ಶನ ಪಡೆಯುತ್ತಿದ್ದಾರೆ. ಕೊಲ್ಲೂರು ದೇವಾಲಯಲಕ್ಕೆ ಆಗಮಿಸುವ ಎಲ್ಲಾ ಭಕ್ತಾದಿಗಳಿಗೆ ದೇವಾಲಯದ ವತಿಯಿಂದ ಉಚಿತ ಭೋಜನ ಪ್ರಸಾದದ ವ್ಯವಸ್ಥೆ ಮಾಡಲಾಗುತ್ತಿದ್ದು, ಇಲ್ಲಿ ದೇವರಿಗೆ ಅರ್ಪಿಸುವ ನೈವೈದ್ಯ ಮತ್ತು ಭಕ್ತರಿಗೆ ನೀಡುವ ಭೋಜನ ಪ್ರಸಾದವು ಗರಿಷ್ಠ ಗುಣಮಟ್ಟದಿಂದ ಕೂಡಿದೆ. ಆರೋಗ್ಯಕ್ಕೆ ಅತ್ಯಂತ ಸುರಕ್ಷಿತವಾದುದು ಎಂದು ಪ್ರಮಾಣ ಪತ್ರ […]