ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಅನ್ಯಾಯ ಆಗಲು ಬಿಡುವುದಿಲ್ಲ; ಡಿಸಿಎಂ ಡಿಕೆ ಶಿವಕುಮಾರ್
ಉಡುಪಿ: ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಅನ್ಯಾಯ ಆಗಲು ಬಿಡುವುದಿಲ್ಲ. ನಮ್ಮ ಸರ್ಕಾರ ಮತ್ತು ನಮ್ಮ ಪಕ್ಷ ಅನ್ಯಾಯ ಮಾಡಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಕೊಲ್ಲೂರು ಮೂಕಾಂಬಿಕಾ ದೇವರ ದರ್ಶನ ಪಡೆದ ಬಳಿಕ ಬಿಪಿಎಲ್ ರೇಷನ್ ಕಾರ್ಡ್ ರದ್ದತಿ ವಿಚಾರಕ್ಕೆ ಸಂಬಂಧಿಸಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ಉಪಮುಖ್ಯಮಂತ್ರಿಯಾಗಿ ದೇವರ ಸನ್ನಿಧಿಯಲ್ಲಿ ಈ ಮಾತನ್ನು ಹೇಳುತ್ತಿದ್ದೇನೆ. ರದ್ದುಗೊಳಿಸುವ ಫಲಾನುಭವಿಗಳ ಪಟ್ಟಿ ನೀಡಲು ಹೇಳಿದ್ದೇವೆ. ಯಾರು ಅರ್ಹ ಫಲಾನುಭವಿಗಳಿದ್ದರೆ ಅವರೆಲ್ಲರಿಂದ ಮರು ಅರ್ಜಿ ಪಡೆಯುತ್ತೇವೆ. ಯಾರಿಗೂ […]