ಕೊಲ್ಲೂರಿನಲ್ಲಿ ಕಳೆಗುಂದಿತು ಜಾತ್ರೆಯ ವೈಭವ: ಎಲ್ಲೆಲ್ಲೂ ಕೊರೋನಾ ಭಯದ್ದೇ ಹವಾ !
ಕುಂದಾಪುರ : ಬಹಳ ವಿಜೃಂಭಣೆಯಿಂದ ಮಂಗಳವಾರ ನಡೆಯಬೇಕಾಗಿದ್ದ ಇತಿಹಾಸ ಪ್ರಸಿದ್ದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವಾರ್ಷಿಕ ಬ್ರಹ್ಮ ರಥೋತ್ಸವವು ಕೊರೊನಾ ವೈರಸ್ ಭೀತಿಯಿಂದಾಗಿ ಸರಳವಾಗಿ ಸೀಮಿತ ಸಂಖ್ಯೆಯ ಉಪಸ್ಥಿತಿಯಲ್ಲಿ ಮಂಗಳವಾರ ಜರುಗಿತು. ತಂತ್ರಿ ನಿತ್ಯಾನಂದ ಅಡಿಗರು ಪ್ರಾಯಶ್ಚಿತ್ತ ವಿಧಿಗಳನ್ನು ಪೂರೈಸಿದ ಬಳಿಕ, ರಥೋತ್ಸವದ ಧಾರ್ಮಿಕ ವಿಧಿಗಳನ್ನು ಪ್ರಾರಂಭಿಸಲಾಯಿತು. ಮುಹೂರ್ತ ಬಲಿ, ಕ್ಷಿಪ್ರ ಬಲಿ ಹಾಗೂ ರಥ ಬಲಿಯ ಬಳಿಕ ೧.೦೫ ಕ್ಕೆ ಕೊಲ್ಲೂರಿನ ರಥೋತ್ಸವದ ಪರಂಪರೆಯಂತೆ ಜೋಡಿ (ಎರಡು) ಉತ್ಸವ ಮೂರ್ತಿಗಳನ್ನು ಬ್ರಹ್ಮ ರಥದಲ್ಲಿ ಕುಳ್ಳಿರಿಸಿ […]