ಕೊಲ್ಲೂರು ದೇವಳದ ಪಕ್ಕ ರಾ.ಹೆ ನಿರ್ಮಾಣ: ಭೂ ಸ್ವಾಧೀನ ಯಥಾಸ್ಥಿತಿ ಕಾಯ್ದುಕೊಳ್ಳಲು ಹೈಕೋರ್ಟ್ ಆದೇಶ

ಕುಂದಾಪುರ: ಕೊಲ್ಲೂರು ಮೂಕಾಂಬಿಕಾ ದೇವಾಲಯದ (Kolluru Mookambika Temple) ಪಕ್ಕದಲ್ಲಿ ರಾಷ್ಟ್ರೀಯ ಹೆದ್ದಾರಿ (National Highway) ನಿರ್ಮಾಣಕ್ಕಾಗಿ ಕೈಗೊಂಡಿರುವ ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಹೈಕೋರ್ಟ್‌ ಆದೇಶಿಸಿದೆ. ದೇವಾಲಯ ಸುತ್ತಲಿನ ಭೂಮಿಯನ್ನು ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಸ್ವಾಧೀನಪಡಿಸಿಕೊಳ್ಳಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಹೊರಡಿಸಿರುವ ಅಧಿಸೂಚನೆ ರದ್ದುಪಡಿಸಬೇಕು ಎಂದು ಕೋರಿ ಸ್ಥಳೀಯ ನಿವಾಸಿ ಗುರುಪ್ರಸಾದ್ ಸಲ್ಲಿಸಿರುವ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ನೇತೃತ್ವದ ವಿಭಾಗೀಯ […]

ಕೊಲ್ಲೂರು ದೇಗುಲದ ಹೆಸರಿನಲ್ಲಿ ಭಕ್ತರಿಗೆ ವಂಚಿಸುತ್ತಿರುವ ನಕಲಿ ಟ್ರಸ್ಟ್: ಕೋಟ್ಯಂತರ ರೂ. ಹಣ ಸಂಗ್ರಹಣೆ ಆರೋಪ

ಕುಂದಾಪುರ: ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದ ಹೆಸರಿನಲ್ಲಿ ನಡೆಸಲಾಗುತ್ತಿರುವ ವಂಚನೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಕೊಲ್ಲೂರು ಡಿವೋಟಿಸ್ ಟ್ರಸ್ಟ್ ಅನ್ನುವ ನಕಲಿ ಟ್ರಸ್ಟ್ ನ ಲಿಂಕ್ ಹರಿದಾಡುತ್ತಿದ್ದು, ದೇಗುಲಕ್ಕೆ ದೇಣಿಗೆ ಹರಕೆ ಸಲ್ಲಿಸುವ ಭಕ್ತರು ಇದಕ್ಕೆ ಹಣ ಕಳಿಸುತ್ತಿದ್ದಾರೆ. ಈ ಬಗ್ಗೆ ಭಕ್ತರೊಬ್ಬರು ದೇಗುಲದ ಆಡಳಿತ ಮಂಡಳಿಗೆ ಇ-ಮೇಲ್ ಮಾಡಿದಾಗ ಈ ಖಾತೆಗೂ ದೇವಸ್ಥಾನಕ್ಕೂ ಸಂಬಂಧ ಇಲ್ಲ ಅಂತ ಸ್ಪಷ್ಟನೆ ಬಂದಿದೆ. ಆ ಬಳಿಕ ಮೂಕಾಂಬಿಕೆಯ ಭಕ್ತರಾಗಿರುವ ರಾಘವೇಂದ್ರ ಹಾಗೂ ಧನಂಜಯ್ ಎಂಬ ವ್ಯಕ್ತಿಗಳು ಈ ಟ್ರಸ್ಟ್ […]

ಅ.15 ರಿಂದ 24 ರ ವರೆಗೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

ಕುಂದಾಪುರ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಅ.15 ರಿಂದ 24 ರ ವರೆಗೆ ಮಹಾನವರಾತ್ರಿ ಉತ್ಸವ ಜರುಗಲಿದೆ. ಅ.23 ರಂದು ಮಹಾ ನವಮಿ ದಿನ ಬೆಳಗ್ಗೆ 11.30ಕ್ಕೆ ಚಂಡಿಕಾ ಯಾಗ, ಮಧ್ಯಾಹ್ನ 12.20ಕ್ಕೆ ರಥೋತ್ಸವ ಜರುಗಲಿದೆ. ಅ.24 ರಂದು ವಿಜಯ ದಶಮಿಯಂದು ವಿದ್ಯಾರಂಭ, ನವಾನ್ನಪ್ರಾಶನ ನಡೆಯಲಿದೆ. ನವರಾತ್ರಿ ಉತ್ಸವದಲ್ಲಿ ಭಕ್ತರು ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾಗಬೇಕು ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ ತಿಳಿಸಿದ್ದಾರೆ. ಮಹಾನವರಾತ್ರಿ ಉತ್ಸವದ ಸಂದರ್ಭ ಪ್ರತಿದಿನ ಶತರುದ್ರ ನಡೆಯಲಿದ್ದು, […]

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಶ್ರೀ ಮನ್ಮಹಾರಥೋತ್ಸವ ಸಂಪನ್ನ

ಕೊಲ್ಲೂರು: ಇಲ್ಲಿನ ಇತಿಹಾಸ ಪ್ರಸಿದ್ದ ಮೂಕಾಂಬಿಕಾ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಮೇ 9 ರಂದು ಶ್ರೀ ಮನ್ಮಹಾರಥೋತ್ಸವವು‌ ಮೂಕಾಂಬಿಕೆಯ ಸನ್ನಿಧಿಯಲ್ಲಿ ನಡೆಯಿತು. ಅಪರಾಹ್ನ 12:15 ರ ಸುಮಾರಿಗೆ ರಥಾರೋಹಣಕ್ಕೆ ಚಾಲನೆ ನೀಡಲಾಗಿದ್ದು, ಮಹಾದ್ವಾರದ ಮುಂಬಾಗಿಲಿನಿಂದ ಹೊರಟ ರಥವು ಸಂಜೆ 5:30 ಕ್ಕೆ ಮೆರವಣಿಗೆ ಮೂಲಕ ಓಲಗ ಮಂಟಪ ತಲುಪಿತು. ಮೆರವಣಿಗೆಯ ದಾರಿಯುದ್ದಕ್ಕೂ ವಿವಿಧ ರೀತಿಯ ಕಲಾ ತಂಡಗಳೂ ಪಾಲ್ಗೊಂಡವು. ತಂತ್ರಿಗಳಾದ ಡಾ. ಕೆ. ಎನ್. ನಿತ್ಯಾನಂದ ಅಡಿಗರ ನೇತೃತ್ವದಲ್ಲಿ ನಡೆದಂತಹ ಅಷ್ಟಬಂಧ ಬ್ರಹ್ಮಕಲಶೋತ್ಸವದ ಬ್ರಹ್ಮರಥದ ವಿಧಿವಿಧಾನ […]

ಕೊಲ್ಲೂರು ದೇವಸ್ಥಾನಕ್ಕೆ ರಿಷಭ್ ಶೆಟ್ಟಿ ಭೇಟಿ

ಕುಂದಾಪುರ: ಶುಕ್ರವಾರದಂದು ಇಲ್ಲಿನ ಜಗತ್ಪ್ರಸಿದ್ದ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ರಿಷಭ್ ಶೆಟ್ಟಿ ಮತ್ತು ಪ್ರಗತಿ ಶೆಟ್ಟಿ ದಂಪತಿಗಳು ಪರಿವಾರ ಸಮೇತರಾಗಿ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದರು.