ಜಲಪಾತಕ್ಕೆ ಜಾರಿ ಬಿದ್ದು ಕೊಚ್ಚಿ ಹೋದ ಯುವಕ

ಉಡುಪಿ: ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯ ಮಧ್ಯೆಯೂ ಬೈಂದೂರು ತಾಲೂಕಿನ ಕೊಲ್ಲೂರು ಬಳಿಯ ಅರಶಿನಗುಂಡಿ ಜಲಪಾತ ವೀಕ್ಷಣೆಗೆಂದು ಹೋದ ಯುವಕ ಜಲಪಾತಕ್ಕೆ ಜಾರಿ ಬಿದ್ದು ಕೊಚ್ಚಿ ಹೋದ ಘಟನೆ ವರದಿಯಾಗಿದೆ. ಭದ್ರಾವತಿ ಮೂಲದ ಶರತ್ ಕುಮಾರ್ (23) ಮೃತಪಟ್ಟ ಯುವಕ. ಅರಶಿನಗುಂಡಿ ಜಲಪಾತ ವೀಕ್ಷಣೆಗೆ ಬಂದಿದ್ದಾಗ ಈ ದುರಂತ ನಡೆದಿದ್ದು, ಯುವಕ ಜಲಪಾತದಲ್ಲಿ ಬೀಳುತ್ತಿರುವ ದೃಶ್ಯ ಮತ್ತೊರ್ವ ಯುವಕನ ಮೊಬೈಲ್ ನಲ್ಲಿ ಸೆರೆಯಾಗಿದೆ. ಯುವಕನ ದೇಹದ ಪತ್ತೆಗೆ ಅಗ್ನಿಶಾಮಕ ದಳ ಕಾರ್ಯಚರಣೆ ನಡೆಸುತ್ತಿದ್ದು, ಘಟನಾ ಸ್ಥಳಕ್ಕೆ ಕೊಲ್ಲೂರು ಪಿ.ಎಸ್.ಐ […]
ಕುಂದಾಪುರ: ಖಿನ್ನತೆಗೊಳಗಾಗಿ ಕೊಲ್ಲೂರಿನ ಕಾಡಿನಲ್ಲಿ ತಿರುಗಾಡುತ್ತಿದ ಯುವತಿಯ ರಕ್ಷಣೆ

ಕುಂದಾಪುರ: ಮಾನಸಿಕವಾಗಿ ನೊಂದು ಕೊಲ್ಲೂರಿನ ಕಾಡಿನಲ್ಲಿ ತಿರುಗಾಡುತ್ತಿದ್ದ ಕೇರಳ ಮೂಲದ ಅಪರಿಚಿತ ಯುವತಿಯನ್ನು ಮಂಗಳವಾರದಂದು ಸಮಾಜ ಸೇವಕ ವಿಶು ಶೆಟ್ಟಿ ಅವರು ಸ್ಥಳೀಯರು, ರಿಕ್ಷಾ ಚಾಲಕರು ಹಾಗೂ ಪೊಲೀಸರ ಸಹಾಯದಿಂದ ರಕ್ಷಿಸಿ, ಮಂಜೇಶ್ವರದ ಮಾನಸಿಕ ಅಸ್ವಸ್ಥರ ಪುನರ್‌ವಸತಿ ಕೇಂದ್ರ ಸ್ನೇಹಾಲಯಕ್ಕೆ ದಾಖಲಿಸಿದ್ದಾರೆ. ಯುವತಿ ತನ್ನ ಹೆಸರು ಅರ್ಚನಾ (28) ಎಂದೂ, ಹುಟ್ಟೂರು ಕೇರಳದ ಚರ್ವತ್ಕಲ್ ಎಂದೂ ಅಸ್ಪಷ್ಟ ಮಾಹಿತಿ ನೀಡಿದ್ದಾಳೆ. ಈಕೆ ಕೊಲ್ಲೂರಿನ ಸಲಗೇರಿ ಬಳಿ ಅರಣ್ಯದಲ್ಲಿ ಸುತ್ತಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ಹಾಗೂ ರಿಕ್ಷಾ ಚಾಲಕರು ಕೊಲ್ಲೂರು […]
ಕೊಲ್ಲೂರು-ಹೆಬ್ರಿ ಮಾರ್ಗದಲ್ಲಿಲ್ಲ ಸರಕಾರಿ ಬಸ್ಸು; ವಿದ್ಯಾರ್ಥಿಗಳು-ಗ್ರಾಮಸ್ಥರ ಗೋಳು ಕೇಳುವವರಿಲ್ಲ

ಕೊಲ್ಲೂರು: ಧಾರ್ಮಿಕ ಮಹತ್ವವಿರುವ ಕೊಲ್ಲೂರಿನಿಂದ ಮುಖ್ಯ ಪೇಟೆ ಹೆಬ್ರಿ ತನಕ ಸರಕಾರಿ ಬಸ್ಸುಗಳು ಓಡಾಟ ನಿಲ್ಲಿಸಿದ್ದು, ಇದರಿಂದ ಗ್ರಾಮಸ್ಥರಿಗೆ ಮತ್ತು ವಿದ್ಯಾರ್ಥಿಗಳಿಗೆ ಅನನುಕೂಲವಾಗುತ್ತಿದೆ.ಈ ವರ್ಷದ ಜನವರಿ ಇಂದ ಮೇ ಮಧ್ಯಭಾಗದಲ್ಲಿ ಈ ಮಾರ್ಗದಲ್ಲಿ ಸರಕಾರಿ ಬಸ್ಸುಗಳ ಓಡಾಟವನ್ನು ನಿಲ್ಲಿಸಲಾಗಿದೆ. ಕೊಲ್ಲೂರಿನಿಂದ ಹೆಬ್ರಿಗೆ ಬೆಳಿಗ್ಗೆ 7.30 ಕ್ಕೆ ಬಿಟ್ಟರೆ ಮತ್ತೆ ಮಧ್ಯಾಹ್ನ 2.00 ಗಂಟೆ ತನಕ ಯಾವುದೇ ಬಸ್ಸು ಇರುವುದಿಲ್ಲ. ಇಲ್ಲಿ ಪ್ರತಿ ನಿತ್ಯ ಹಲವಾರು ವಿದ್ಯಾರ್ಥಿಗಳು ಶಂಕರನಾರಾಯಣ ಸರಕಾರಿ ಕಾಲೇಜಿಗೆ ತೆರಳುತ್ತಾರೆ. ಈ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. […]
ಕೊಲ್ಲೂರು: ಜನವರಿ 6 ರಿಂದ 8 ರ ಕರ್ನಾಟಕ ಹಕ್ಕಿ ಹಬ್ಬ

ಕೊಲ್ಲೂರು: ಕರ್ನಾಟಕ ಅರಣ್ಯ ಇಲಾಖೆ ಹಾಗೂ ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಸಹಯೋಗದಲ್ಲಿ ಕರ್ನಾಟಕ ಹಕ್ಕಿ ಹಬ್ಬ ಕಾರ್ಯಕ್ರಮವು ಜನವರಿ 6 ರಿಂದ 8 ರ ವರೆಗೆ ಕೊಲ್ಲೂರಿನ ಹಲ್ಕಲ್‌ನಲ್ಲಿ ನಡೆಯಲಿದೆ. ಜ. 6 ರಂದು ಬೆಳಗ್ಗೆ 11 ಗಂಟೆಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಕಾರ್ಯಕ್ರಮ ಉದ್ಘಾಟಿಸಲಿದ್ದು, ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು […]
ಕುಂದಾಪುರ: ಡಿ. 3 ರಂದು ವಿದ್ಯುತ್ ವ್ಯತ್ಯಯ

ಕುಂದಾಪುರ: ಕೊಲ್ಲೂರು 33 ಕೆ.ವಿ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿ ಮತ್ತು 110/33/11 ಕೆ.ವಿ ನಾವುಂದ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಕಂಬದಕೋಣೆ ಹಾಗೂ ಮರವಂತೆ ಮಾರ್ಗದಲ್ಲಿ ವಾಹಕ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮರವಂತೆ, ನಾವುಂದ, ಯಡೇರಿ, ಕಂಬದಕೋಣೆ, ಹೆರಂಜಾಲು, ಕಾಲ್ತೋಡು ಕಿರಿಮಂಜೇಶ್ವರ, ಬವಳಾಡಿ ಮತ್ತು ಕೆರ್ಗಾಲ್ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಡಿಸೆಂಬರ್ 3 ರಂದು ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. […]