ಕರಾವಳಿಯ ಜೀವನಾಡಿ ಮತ್ಸ್ಯಗಂಧಾ ಎಕ್ಸ್ ಪ್ರೆಸ್ ಗೆ ರಜತ ಸಂಭ್ರಮ: ಉಡುಪಿ ನಿಲ್ದಾಣದಲ್ಲಿ ಸಂಭ್ರಮಾಚರಣೆ
ಉಡುಪಿ: ದಿ. ಜಾರ್ಜ್ ಫೆರ್ನಾಂಡೀಸ್ ಅವರ ಕನಸಿನ ಕೂಸು, ಅವಿಭಜಿತ ದ.ಕ ಜಿಲ್ಲೆಯನ್ನು ಒಂದುಗೂಡಿಸುವ ಕೊಂಕಣ ರೈಲ್ವೆಯ “ಮತ್ಸ್ಯ ಗಂಧಾ” ಎಕ್ಸ್‌ಪ್ರೆಸ್ ರೈಲು ಈ ಮಾರ್ಗದಲ್ಲಿ ತನ್ನ ಓಡಾಟವನ್ನು 1998ರ ಮೇ 1ರಂದು ಪ್ರಾರಂಭಿಸಿತು. ಉಡುಪಿಯೂ ಕೂಡಾ ಪ್ರತ್ಯೇಕ ಜಿಲ್ಲೆಯಾಗಿ ರೂಪುಗೊಂಡು ರಜತ ಸಂಭ್ರಮವನ್ನು ಆಚರಿಸುತ್ತಿರುವ ಈ ಹೊತ್ತಿನಲ್ಲಿ ಮತ್ಸ್ಯಗಂಧಾ ಎಕ್ಸ್‌ಪ್ರೆಸ್ ಕೂಡಾ 25 ವರ್ಷ ಪೂರ್ಣಗೊಳಿಸಿ ರಜತ ಮಹೋತ್ಸವವನ್ನು ಆಚರಿಸುತ್ತಲಿದೆ. ಈ ದಿನವನ್ನು ಅವಿಸ್ಮರಣೀಯವಾಗಿಸಲು ಉಡುಪಿ ರೈಲು ಯಾತ್ರಿ ಸಂಘವು ಇದನ್ನು ವಿಶೇಷ ರೀತಿಯಲ್ಲಿ ಆಚರಿಸಲು […]
ಕೊಂಕಣ ರೈಲ್ವೆಯಲ್ಲಿ ಕಳ್ಳತನ: ಗಂಭೀರ ಪರಿಗಣನೆಗೆ ಕೇಂದ್ರ ಸಚಿವೆ ಸೂಚನೆ
ಉಡುಪಿ: ಕರಾವಳಿ ಜಿಲ್ಲೆಗಳನ್ನು ಹಾದು ಹೋಗುವ ಕೊಂಕಣ ರೈಲ್ವೆ ವ್ಯಾಪ್ತಿಯ ರೈಲುಗಳಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಳ್ಳತನ ಪ್ರಕರಣಗಳು ನಡೆಯುತ್ತಿದ್ದು, ರೈಲ್ವೆ ಇಲಾಖೆ ಈ ಬಗ್ಗೆ ಅತ್ಯಂತ ಗಂಭೀರವಾಗಿ ಪರಿಗಣಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಸೂಚನೆ ನೀಡಿದರು. ಅವರು ಬುಧವಾರ ನಗರದ ಜಿಲ್ಲಾ ಪಂಚಾಯತ್‍ನ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ದಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ […]
ಕೊಂಕಣ ರೈಲ್ವೆ ವತಿಯಿಂದ ಮಂಗಳೂರು-ಮುಂಬೈ ನಡುವೆ ಚಳಿಗಾಲದ ಸಾಪ್ತಾಹಿಕ ವಿಶೇಷ ರೈಲುಗಳ ವೇಳಾಪಟ್ಟಿ ಇಲ್ಲಿದೆ
ಮಂಗಳೂರು: ಕೊಂಕಣ ರೈಲ್ವೆಯು ಕೇಂದ್ರ ರೈಲ್ವೆಯ ಸಹಯೋಗದೊಂದಿಗೆ ಮುಂಬೈ ಮತ್ತು ಮಂಗಳೂರು ನಡುವೆ ಚಳಿಗಾಲದಲ್ಲಿ ಹೆಚ್ಚುವರಿ ಪ್ರಯಾಣಿಕರನ್ನು ತೆರವುಗೊಳಿಸಲು ವಿಶೇಷ ರೈಲುಗಳನ್ನು ನಿರ್ವಹಿಸಲಿದೆ. ಡಿಸೆಂಬರ್ 9 ರಿಂದ ಜನವರಿ 6 ರವರೆಗೆ ಪ್ರತಿ ಶುಕ್ರವಾರ: ರೈಲು ನಂ. 01453 ಲೋಕಮಾನ್ಯ ತಿಲಕ್ (ಟರ್ಮಿನಲ್) – ಮಂಗಳೂರು ಜಂಕ್ಷನ್ ವಿಶೇಷ (ಸಾಪ್ತಾಹಿಕ), ಲೋಕಮಾನ್ಯ ತಿಲಕ್ (ಟಿ) ನಿಂದ ರಾತ್ರಿ 10.15 ಕ್ಕೆ ಹೊರಡಲಿದೆ. ರೈಲು ಮರುದಿನ ಸಂಜೆ 5.05ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ಡಿಸೆಂಬರ್ 10 ರಿಂದ ಜನವರಿ […]
2024 ರೊಳಗೆ 67956 ಕಿ.ಮೀ. ಉದ್ದದ ರೈಲು ಮಾರ್ಗ ವಿದ್ಯುತ್ತೀಕರಣ ಯೋಜನೆ: ಶೋಭಾ ಕರಂದ್ಲಾಜೆ
ಉಡುಪಿ: ಕೊಂಕಣ ರೈಲ್ವೆಯು ಕರಾವಳಿಯ ಜೀವನಾಡಿಯಾಗಿದ್ದು, ಕರಾವಳಿಯನ್ನು ಉತ್ತರ ಭಾರತದೊಂದಿಗೆ ಜೋಡಿಸುವ ಮಾರ್ಗವಾಗಿದೆ. ಪರಿಸರದ ಹಲವು ಅಡೆತಡೆಗಳನ್ನು ಎದುರಿಸಿ ಆರಂಭಗೊಂಡ ಈ ರೈಲ್ವೆ ಮಾರ್ಗವನ್ನು ಪ್ರಸ್ತುತ ವಿದ್ಯುತ್ತೀಕರಣಗೊಳಿಸಿರುವುದರಿಂದ ವಾರ್ಷಿಕವಾಗಿ 300 ಕೋಟಿ ರೂ. ಉಳಿತಾಯವಾಗಲಿದೆ. ದೇಶದಲ್ಲಿ 2024 ರೊಳಗೆ 67956 ಕಿ.ಮೀ. ರೈಲು ಮಾರ್ಗವನ್ನು ವಿದ್ಯುತ್ತೀಕರಣಗೊಳಿಸುವ ಯೋಜನೆಯಿದ್ದು, ಈಗಾಗಲೇ 45881 ಕಿ.ಮೀ. ಯೋಜನೆ ಪೂರ್ಣವಾಗಿದ್ದು, ಇದಕ್ಕಾಗಿ 13500 ಕೋಟಿ ರೂ. ವೆಚ್ಚವಾಗಿದೆ. ಇನ್ನು 2 ವರ್ಷದಲ್ಲಿ ಬಾಕಿ ಕಾಮಗಾರಿ ಪೂರ್ಣಗೊಳ್ಳಲಿದೆ. ಎಂದು ಕೇಂದ್ರ ಕೃಷಿ ಮತ್ತು ರೈತ […]