ಬಹು ನಿರೀಕ್ಷಿತ ಕೊಂಕಣಿ ಚಲನಚಿತ್ರ ‘ಅಸ್ಮಿತಾಯ್’ ಸೆಪ್ಟೆಂಬರ್ 15 ರಂದು ತೆರೆಗೆ
ಮಂಗಳೂರು: ಕೊಂಕಣಿಯ ಕಲೆ, ಸಾಹಿತ್ಯ, ಸಂಸ್ಕೃತಿಯ ಎಲ್ಲಾ ಕ್ಷೇತ್ರಗಳಲ್ಲಿ ಮಹತ್ತರ ಸಾಧನೆ ಮಾಡಿದ, ಗಿನ್ನೆಸ್ ದಾಖಲೆ ಬರೆದ ಪ್ರಮುಖ ಸಾಂಸ್ಕೃತಿಕ ಸಂಘಟನೆ ಮಾಂಡ್ ಸೊಭಾಣ್ ಸಿನೆಮಾ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿ ಅಸ್ಮಿತಾಯ್ ಚಲನಚಿತ್ರವನ್ನು ನಿರ್ಮಿಸಿದ್ದು ಈ ಸಿನೆಮಾವು ಸೆಪ್ಟೆಂಬರ್ 15 ರಂದು ತೆರೆ ಕಾಣಲಿದೆ. ಈ ಬಗ್ಗೆ ಚಿತ್ರತಂಡವು ಗುರುವಾರದಂದು ನಗರದ ಕೆನರಾ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯನ್ನು ಹಮ್ಮಿಕೊಂಡಿತ್ತು. ಚಿತ್ರದ ಬಗ್ಗೆ ಮಾಹಿತಿ ನೀಡಿದ ತಂಡವು, ಕೊಂಕಣಿ ಜನರ ಅಸ್ಮಿತೆಯ ಹುಡುಕಾಟದ ಎಳೆಯೊಂದಿಗೆ ಸಾಗುವ ಕತೆಯು ಗೋವಾದಿಂದ […]
ಮಂಗಳೂರು: ಅಸ್ಮಿತಾಯ್ ಕೊಂಕಣಿ ಚಿತ್ರದ ಟ್ರೈಲರ್ ಬಿಡುಗಡೆ
ಮಂಗಳೂರು: ಮಾಂಡ್ ಸೊಭಾಣ್ ನಿರ್ಮಾಣದ ಕೊಂಕಣಿ ಚಲನಚಿತ್ರ ಅಸ್ಮಿತಾಯ್ ಇದರ ಟ್ರೈಲರ್ ಬಿಡುಗಡೆ ಕಾರ್ಯಕ್ರಮವು ಆ. 13 ರಂದು ಮಂಗಳೂರಿನ ಭಾರತ್ ಸಿನೆಮಾದಲ್ಲಿ ನಡೆಯಿತು. ಅನಿವಾಸಿ ಉದ್ಯಮಿ ರೊನಾಲ್ಡ್ ಪಿಂಟೊ ಇವರು ಡೋಲು ಬಾರಿಸುವ ಮೂಲಕ ಟ್ರೈಲರ್ ಬಿಡುಗಡೆ ಮಾಡಿದರು. ಚಿತ್ರದ ಪೋಸ್ಟರ್ ಅನ್ನು ರಿಯಲ್ ಎಸ್ಟೇಟ್ ಉದ್ಯಮಿ ರೋಹನ್ ಮೊಂತೇರೊ ಹಾಗೂ ಕುಕ್ಕುಟ ಕ್ಷೇತ್ರದ ಮುಂಚೂಣಿ ಉದ್ಯಮ ಐಡಿಯಲ್ ಚಿಕನ್ಸ್ ಇದರ ಮಾಲಕ ವಿನ್ಸೆಂಟ್ ಕುಟಿನ್ಹಾ ಪ್ರೀಮಿಯರ್ ಪ್ರದರ್ಶನದ ಟಿಕೇಟ್ ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು. […]