ಕೊಂಕಣಿ ಲೇಖಕ ಸಂಘದಿಂದ ಶ್ರೀಮತಿ ಐರಿನ್ ಪಿಂಟೋರವರಿಗೆ ಪ್ರಶಸ್ತಿ ಪ್ರದಾನ
ಮಂಗಳೂರು: ಖ್ಯಾತ ಲೇಖಕಿ ಶ್ರೀಮತಿ ಐರಿನ್ ಪಿಂಟೋ ಇವರಿಗೆ ಕೊಂಕಣಿ ಲೇಖಕ ಸಂಘವು ಕೊಂಕಣಿ ಸಾಹಿತ್ಯ ಪ್ರಶಸ್ತಿ 2023 ನೀಡಿ ಗೌರವಿಸಿದೆ. ಫೆ. 25 ರಂದು ನಂತೂರಿನ ಬಜ್ಜೋಡಿ ಸಂದೇಶ ಪ್ರತಿಷ್ಠಾನದ ಸಂದೇಶ ಆವರಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಿತು. ಮುಖ್ಯ ಅತಿಥಿಯಾಗಿ ರಾಕ್ಣೋ ವಾರಪತ್ರಿಕೆಯ ಮಾಜಿ ಸಂಪಾದಕ ರೆ.ಫ್ರಾನ್ಸಿಸ್ ರೊಡ್ರಿಗಸ್ ಹಾಗೂ ಗೌರವ ಅತಿಥಿಯಾಗಿ ಕಾಸರಗೋಡು ಸರ್ಕಾರಿ ಕಾಲೇಜಿನ ಪ್ರಾಧ್ಯಾಪಕ ಪ್ರೊ.ರಾಧಾಕೃಷ್ಣ ಬೆಳ್ಳೂರು ಭಾಗವಹಿಸಿದರು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಶ್ರೀಮತಿ ಐರಿನ್ ಪಿಂಟೋ, ಕೊಂಕಣಿ ಲೇಖಕಿ, […]