ಕೂಡಲ ಸಂಗಮ ಕ್ಷೇತ್ರದ ಕಾಮಗಾರಿ ಜನವರಿಯೊಳಗೆ ಪೂರ್ಣಗೊಳಿಸಲು ಮುಖ್ಯಮಂತ್ರಿ ಸೂಚನೆ
ಬೆಂಗಳೂರು: 12ನೇ ಶತಮಾನದ ಸಮಾಜ ಸುಧಾರಕ ಬಸವಣ್ಣನವರ ಐಕ್ಯ ಸ್ಥಳವಾದ ಕೂಡಲ ಸಂಗಮ ಕ್ಷೇತ್ರದ ಎಲ್ಲಾ ಕಾಮಗಾರಿಗಳನ್ನು 2023ರ ಜನವರಿಯೊಳಗೆ ಪೂರ್ಣಗೊಳಿಸುವಂತೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಸೂಚನೆ ನೀಡಿದ್ದಾರೆ. ಗುರುವಾರ ಇಲ್ಲಿ ನಡೆದ ಕೂಡಲ ಸಂಗಮ ಅಭಿವೃದ್ಧಿ ಪ್ರಾಧಿಕಾರದ 16ನೇ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಸವಣ್ಣ ಅಂತರಾಷ್ಟ್ರೀಯ ಕೇಂದ್ರದ ಕಟ್ಟಡ, ಡಿಜಿಟಲ್ ಕೇಂದ್ರ, ವಸ್ತುಪ್ರದರ್ಶನ ಹಾಗೂ ಕೂಡಲ ಸಂಗಮ ವಾಣಿಜ್ಯ ಸಂಕೀರ್ಣ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು. ಈ ಕಾಮಗಾರಿಗಳು ಬಸವಣ್ಣವರ ಬದುಕು, […]