ಕೂಳೂರಿನಲ್ಲಿ ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
ಕೂಳೂರು: ಮಾಜಿ ಶಾಸಕ ಮೊಯಿದೀನ್ ಬಾವಾ ಅವರ ಸಹೋದರ ಮಮ್ತಾಜ್ ಅಲಿ ಅವರ ಕಾರು ಅಪಘಾತಗೊಂಡ ಸ್ಥಿತಿಯಲ್ಲಿ ಅ.6ರ ರವಿವಾರ ಕೂಳೂರು ಸೇತುವೆ ಮೇಲೆ ಪತ್ತೆಯಾಗಿದ್ದು, ಅವರು ನಾಪತ್ತೆಯಾಗಿದ್ದಾರೆ. ರವಿವಾರ ಮುಂಜಾನೆ ಘಟನೆ ಬೆಳಕಿಗೆ ಬಂದಿದ್ದು, ಅಗ್ನಿಶಾಮಕ ಹಾಗೂ ಈಜು ತಜ್ಞರು ನದಿಯಲ್ಲಿ ಹುಡುಕಾಟ ಆರಂಭಿಸಿದ್ದರೆ, ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿ ಚುರುಕಿನ ತನಿಖೆ ಕೈಗೊಂಡಿದ್ದಾರೆ. ಮಮ್ತಾಜ್ ಅಲಿ ಅವರು ತನ್ನ ಮಗಳಿಗೆ ವಾಟ್ಸಪ್ ಮೂಲಕ ಇನ್ನು ನಾನು ಹಿಂತಿರುಗಿ ಬರುವುದಿಲ್ಲ ಎಂಬ ಸಂದೇಶ ಕೂಡ ರವಾನಿಸಿದ್ದಾರೆ […]