ಉಡುಪಿ: ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸಿಬ್ಬಂದಿಗಳ ವೇತನ ಪಾವತಿಗೆ ರೂ.368.70 ಲಕ್ಷ ಬಿಡುಗಡೆ
ಉಡುಪಿ: ಇಲ್ಲಿನ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಾಧಿಕಾರಿಗಳು ಮತ್ತು ಇತರ ಸಿಬ್ಬಂದಿಗಳ ಬಾಕಿ ಇರುವ ವೇತನವನ್ನು ಪಾವತಿಸಲು ಶಾಸಕ ಕೆ ರಘುಪತಿ ಭಟ್ ಮಾಡಿರುವ ಮನವಿಯಂತೆ ವೈದ್ಯಾಧಿಕಾರಿಗಳು ಮತ್ತು ಇತರ ಸಿಬ್ಬಂದಿಗಳ ಬಾಕಿ ಇರುವ ವೇತನವನ್ನು ಪಾವತಿಸಲು ರೂ. 228.33 ಲಕ್ಷಗಳು ಹಾಗೂ ಇತರ ಬಾಕಿ ಇರುವ ಸಾದಿಲ್ವಾರು ವೆಚ್ಚ ರೂ. 140.37 ಲಕ್ಷಗಳು ಸೇರಿದಂತೆ ಒಟ್ಟು ರೂ. 368.70 ಲಕ್ಷ ರೂ ಗಳನ್ನು ಭರಿಸಲು ರಾಜ್ಯ […]
ಕೂಸಮ್ಮ ಶಂಭು ಶೆಟ್ಟಿ ಆಸ್ಪತ್ರೆಯಲ್ಲಿ ಖಾಲಿ ಹುದ್ದೆ: ನೇರ ಸಂದರ್ಶನ
ಉಡುಪಿ: ಉಡುಪಿಯ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಖಾಲಿ ಇರುವ ಮಕ್ಕಳ ತಜ್ಞ, ಅರಿವಳಿಕೆ ಹಾಗೂ ಸೋನೊಲಾಜಿಸ್ಟ್ ತಲಾ 1 ಹುದ್ದೆ ಹಾಗೂ ವೈದ್ಯಾಧಿಕಾರಿಗಳ 3 ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳುವ ಸಲುವಾಗಿ ಸೆಪ್ಟಂಬರ್ 15 ರಂದು ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ […]
ಆಗಸ್ಟ್1-15 ರ ವರೆಗೆ ತೀವ್ರತರ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮ
ಉಡುಪಿ: 5 ವರ್ಷದೊಳಗಿನ ಮಕ್ಕಳಲ್ಲಿ ಅತಿಸಾರ ಭೇದಿಯಿಂದ ಸಂಭವಿಸುವ ಮರಣ ಪ್ರಮಾಣವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಆಗಸ್ಟ್ 1 ರಿಂದ 15 ರ ವರೆಗೆ ರಾಷ್ಟ್ರೀಯ ತೀವ್ರತರ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮವನ್ನು ಆರೋಗ್ಯ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ 5 ವರ್ಷದೊಳಗಿನ ಒಟ್ಟು 69,881 ಮಕ್ಕಳಿದ್ದು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಇವರ ಮನೆಗಳಿಗೆ ತೆರಳಿ ಓ.ಆರ್.ಎಸ್ ಪ್ಯಾಕೆಟ್ ವಿತರಣೆ ಮಾಡುವ ಮೂಲಕ ಇವುಗಳ ಬಳಕೆಯ ಕುರಿತು ಮಾಹಿತಿ ನೀಡಲಿದ್ದಾರೆ. ಆರೋಗ್ಯ ಸಂಸ್ಥೆಗಳಲ್ಲಿ ಮತ್ತು ಉಪಕೇಂದ್ರಗಳಲ್ಲಿ ಓ.ಆರ್.ಎಸ್ […]
ಉಡುಪಿಯಲ್ಲಿ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ
ಉಡುಪಿ: ಇಲ್ಲಿನ ಕೂಸಮ್ಮ ಶಂಭು ಶೆಟ್ಟಿ ಹಾಜಿ ಅಬ್ದುಲ್ಲಾ ತಾಯಿ ಮಕ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ತಾಯಿಯೊಬ್ಬರು ಗುರುವಾರದಂದು ಮೂರು ಮಕ್ಕಳಿಗೆ ಜನ್ಮ ನೀಡಿದ್ದಾರೆ. ತ್ರಿವಳಿ ಮಕ್ಕಳು ಮತ್ತು ತಾಯಿಯ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಉ.ಕ ಜಿಲ್ಲೆಯ ಅಂಕೋಲಾ ನಿವಾಸಿ ಸುನಿತಾ (27) ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ. ಡಾ.ಕವಿಷಾ ಭಟ್, ಡಾ ರಜನಿ ಕಾರಂತ್, ಡಾ ಸೂರ್ಯನಾರಾಯಣ್, ಡಾ.ಗಣಪತಿ ಹೆಗಡೆ ಹಾಗೂ ಡಾ. ಮಹಾದೇವ ಭಟ್ ಅವರನ್ನು ಒಳಗೊಂಡ ತಜ್ಞ ವೈದ್ಯರ […]