ಕೊರೋನಾ ಭೀತಿ: ನಾಳೆಯಿಂದ ಚಿತ್ರಮಂದಿರ, ಮಾಲ್, ಶಾಲಾ-ಕಾಲೇಜು, ವಿಶ್ವವಿದ್ಯಾಲಯ ಬಂದ್ !
ಬೆಂಗಳೂರು: ಕೊರೋನಾ ಭೀತಿ ದಿನ ಕಳೆದಂತೆ ಹೆಚ್ಚಾಗುತ್ತಿದ್ದು ಕೊರೋನಾ ವೈರಸ್ ಹರಡದಂತೆ ತಡೆಯಲು ನಾಳೆಯಿಂದ ಒಂದು ವಾರ ರಾಜ್ಯಾದ್ಯಂತ ಮಾಲ್, ಚಿತ್ರಮಂದಿರ, ಶಾಲಾ, ಕಾಲೇಜುಗಳು, ವಿಶ್ವವಿದ್ಯಾಲಯಗಳನ್ನು ಬಂದ್ ಮಾಡುವಂತೆಸರ್ಕಾರ ಆದೇಶಿಸಿದೆ. ಮದುವೆ, ಸಭೆ-ಸಮಾರಂಭಗಳನ್ನು ರದ್ದು ಮಾಡುವಂತೆ ಸರ್ಕಾರ ಹೇಳಿದೆ. ಈ ವಿಷಯವನ್ನು ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಒಂದು ವಾರಗಳ ಕಾಲ ಕ್ರೀಡಾ ಕಾರ್ಯಕ್ರಮಗಳು, ನೈಟ್ ಕ್ಲಬ್, ಪಬ್, ಮೇಳ, ಸೆಮಿನಾರ್ ಗಳು, ನಿಶ್ಚಿತಾರ್ಥ ಕಾರ್ಯಕ್ರಮಗಳು ಮತ್ತು ಜಾತ್ರೆಗಳನ್ನು ಬಂದ್ ಮಾಡಲಾಗುತ್ತಿದೆ. ಒಂದು […]