ರಾಜ್ಯದಲ್ಲಿ ನಾಲ್ವರಿಗೆ ಕೊರೋನಾ ಸೋಂಕು, ಸರ್ಕಾರದಿಂದ ಸಕಲ ಮುನ್ನೆಚ್ಚರಿಕೆ ಕ್ರಮ: ಸಿ.ಎಂ
ಬೆಂಗಳೂರು: ರಾಜ್ಯದಲ್ಲಿ ನಾಲ್ವರಿಗೆ ಕೋವಿಡ್ 19 ಸೋಂಕು ತಗುಲಿದ್ದು, ಸೋಂಕು ಹರಡದಂತೆ ತಡೆಯಲು ಸಮಿತಿ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು (ಮಂಗಳವಾರ) ಕೊರೋನಾ ಸೋಂಕು ಸಂಬಂಧ ಸಚಿವರು ಮತ್ತು ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಕಳೆದ ಎರಡು ದಿನಗಳಲ್ಲಿ ಕರ್ನಾಟಕದಲ್ಲಿ 4 ಮಂದಿಗೆ ಸೋಂಕು ತಗುಲಿರುವುದು ದೃಢ ಪಟ್ಟಿದೆ. ಈ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಿ, ರಾಜ್ಯದ ಪರಿಸ್ಥಿತಿ ಹಾಗೂ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದ್ದೇನೆ. ರಾಜ್ಯದಲ್ಲಿ […]