ಕೋಟ: ದೇಗುಲದೊಳಗೆ ವ್ಯಕ್ತಿ ನೇಣಿಗೆ ಶರಣು

ಕೋಟ: ದೇಗುಲದ ಆವರಣದೊಳಗೆ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟತಟ್ಟು ಪಡುಕರೆಯ ಶಿರಸಿ ಮಾರಿಕಾಂಬ ಅಮ್ಮನವರ ದೇವಳದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಕೋಟತಟ್ಟು ಪಡುಕರೆ ನಿವಾಸಿ ಚೆನೈಯ್ಯ ಪೂಜಾರಿ (51) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಪಡುಕರೆಯ ಸಮುದ್ರ ಕಿನಾರೆಯಲ್ಲಿ ಬೀಡಾದಂಗಡಿ ಹಾಕಿಕೊಂಡು ಜೀವನ ಸಾಗಿಸುತ್ತಿದ್ದರು. ಇಂದು ಮುಂಜಾನೆ ದೇವಳದ ಬಾವಿಯೊಳಗೆ ಬಾವಿಯ ಹಗ್ಗದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೋಟ ಠಾಣಾ ವ್ಯಾಪ್ತಿಯಲ್ಲಿ […]