ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯ್ಯರ ಹೆಸರು ನಾಮಕರಣಕ್ಕೆ ಒತ್ತಾಯ: ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಮುಖ್ಯಮಂತ್ರಿಗೆ ಮನವಿ

ಬೆಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡಿನ ವೀರ ಪುರುಷರಾದ ಕೋಟಿ-ಚೆನ್ನಯ್ಯರ ಹೆಸರು ನಾಮಕರಣ ಮಾಡಬೇಕೆಂದು ಒತ್ತಾಯಿಸಿ ವಿಧಾನಪರಿಷತ್ತಿನ ಸಭಾ ನಾಯಕರು, ಮೀನುಗಾರಿಕಾ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಅವಿಭಜಿತ ದಕ್ಷಿಣ ಕನ್ನಡ – ಉಡುಪಿ ಜಿಲ್ಲೆಯ ಶಾಸಕರ ನಿಯೋಗ ಭೇಟಿ ಮಾಡಿ ಮನವಿ ಮಾಡಿತು. ನಿಯೋಗದಲ್ಲಿ ವಿಧಾನ ಸಭೆಯ ಮುಖ್ಯ ಸಚೇತಕರು ಆಗಿರುವ ಕಾರ್ಕಳ ಶಾಸಕ ಸುನೀಲ್ ಕುಮಾರ್, ಶಾಸಕರಾದ […]