ಕೋಟ ಸಹಕಾರಿ ವ್ಯಾವಸಾಯಿಕ ಸಂಘದ ನೂತನ ಸಭಾಭವನ, ಗೋದಾಮು ಹಾಗೂ ಸೇವಾ ಕೇಂದ್ರ ಉದ್ಘಾಟನೆ
ಕುಂದಾಪುರ: ಭಾನುವಾರದಂದು ಕೋಟ ಸಹಕಾರಿ ವ್ಯಾವಸಾಯಿಕ ಸಂಘದ ಪ್ರಧಾನ ಕಚೇರಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಬಿ.ಸಿ. ಹೊಳ್ಳ ಸ್ಮಾರಕ ಸಭಾಭವನ, ಗೋದಾಮು ಮತ್ತು ಸೇವಾ ಕೇಂದ್ರದ ಉದ್ಘಾಟನೆಯನ್ನು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಇವರು ನೆರವೇರಿಸಿ ಮಾತನಾಡಿ, ಕೋಟ ಸಿಎ ಬ್ಯಾಂಕ್ ರೈತರು, ಬಡವರು ಮತ್ತು ಮಧ್ಯಮ ವರ್ಗದವರಿಗೆ ಶಕ್ತಿ ತುಂಬಿದ ಸಂಸ್ಥೆಯಾಗಿದೆ. ಪ್ರಸ್ತುತ ತಿಮ್ಮ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ರಾಜ್ಯಕ್ಕೆ ಮಾದರಿಯಾಗಿ ಮುನ್ನಡೆಯುತ್ತಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಜಿ. ತಿಮ್ಮ ಪೂಜಾರಿ ವಹಿಸಿದ್ದರು. […]