ಗ್ರಾಮ ಪಂಚಾಯತ್‌ಗಳಲ್ಲಿ ಯಾವುದೇ ಹೊಸ ಕೋವಿಡ್ ಪ್ರಕರಣಗಳು ಕಂಡುಬರದoತೆ ಕಾರ್ಯನಿರ್ವಹಿಸಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ
ಉಡುಪಿ ಜೂ1: ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ಕೋವಿಡ್ ಪ್ರಕರಣಗಳನ್ನು ಶೂನ್ಯಕ್ಕೆ ತರುವ ನಿಟ್ಟಿನಲ್ಲಿ ಎಲ್ಲಾ ಗ್ರಾಮ ಪಂಚಾಯತ್ ಕಾರ್ಯಪಡೆಗಳು ಕಾರ್ಯೋನ್ಮುಖವಾಗುವಂತೆ ಮುಜರಾಯಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಅವರು ಮಂಗಳವಾರ ಕುಂದಾಪುರ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯತ್‌ಗಳೊoದಿಗೆ ವೀಡಿಯೋ ಸಂವಾದದಲ್ಲಿ ಮಾತನಾಡಿದರು. ಎಲ್ಲಾ ಗ್ರಾಮಗಳು 10 ದಿನದಲ್ಲಿ ತಮ್ಮ ವ್ಯಾಪ್ತಿಯಲ್ಲಿ ಪ್ರಸ್ತುತ ಕಂಡು ಬಂದಿರುವ ಕೋವಿಡ್ ಪ್ರಕರಣಗಳನ್ನು ಶೂನ್ಯಕ್ಕೆ ಇಳಿಸಿ, ಯಾವುದೇ ಹೊಸ ಪ್ರಕರಣಗಳು ಕಂಡುಬರದoತೆ ಕಾರ್ಯನಿರ್ವಹಿಸಬೇಕು. ಇದಕ್ಕಾಗಿ […]