ಕೋಟ ಜೋಡಿ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದಿದ್ದ ಜಿ.ಪಂ ಸದಸ್ಯ ಬಾರಿಕೆರೆ ಮತ್ತೆ ಜೈಲಿಗೆ

ಕುಂದಾಪುರ: ಇಡೀ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದ್ದ ಕೋಟ ಜೋಡಿ ಕೊಲೆ ಪ್ರಕರಣದಲ್ಲಿ ಸಂಚು ರೂಪಿಸಿದ ಆರೋಪ ಮೇಲೆ ಜೈಲುವಾಸ ಅನುಭವಿಸಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ಜಿಲ್ಲಾ ಪಂಚಾಯತ್ ಸದಸ್ಯ ಆರೋಪಿ ರಾಘವೇಂದ್ರ ಕಾಂಚನ್ ಬಾರಿಕೆರೆ ಮತ್ತೆ ಜೈಲು ಸೇರಿದ್ದಾನೆ. ಈ ಹಿಂದೆ ಆರೋಪಿ ರಾಘವೇಂದ್ರ ಕಾಂಚನ್ ಪಡೆದ ಜಾಮೀನು ಸರ್ವೋಚ್ಚ ನ್ಯಾಯಾಲಯದಲ್ಲಿ ವಜಾಗೊಂಡಿತ್ತು. ಆದೇಶವಾಗಿ ಹದಿನೈದು ದಿನ ಕಳೆದರೂ ಪೊಲೀಸರು ಆತನನ್ನು ಬಂಧಿಸಿರಲಿಲ್ಲ. ಈ ಬಗ್ಗೆ ಮೃತರ ಮನೆಯವರು ಹೋರಾಟದ ಎಚ್ಚರಿಕೆ ನೀಡಿದ್ದರು. ಶುಕ್ರವಾರ ಕುಂದಾಪುರ ವಿಚಾರಣೆಗಾಗಿ ಜೋಡಿ […]