ಕೋಟ ಜೋಡಿ ಕೊಲೆ ಪ್ರಕರಣ :ಆರೋಪಿಗಳು ನ್ಯಾಯಾಲಯಕ್ಕೆ ಹಾಜರು
ಕುಂದಾಪುರ; ಜ.೨೬ ರಂದು ಕೋಟ ಚಿಕ್ಕನಕೆರೆ ಎಂಬಲ್ಲಿ ತಡರಾತ್ರಿ ನಡೆದಿದ್ದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ೧೬ ಮಂದಿ ಆರೋಪಿಗಳನ್ನು ಶುಕ್ರವಾರ ಕುಂದಾಪುರ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಕಾಂತ ಅವರ ಮುಂದೆ ಹಾಜರುಪಡಿಸಲಾಗಿದೆ. ಪೊಲೀಸರಿಂದ ಬಂಧನಕ್ಕೊಳಗಾಗಿ ಇಂದಿನವರೆಗೆ ನ್ಯಾಯಾಂಗ ಬಂಧನದಲ್ಲಿದ್ದ ಅಭಿಷೇಕ್ ಪಾಲನ್, ರೊಟ್ಟಿ ನಾಗರಾಜ್, ಸಂತೋಷ್ ಕುಂದರ್, ಪ್ರಣವ್ ರಾವ್, ಪವನ್ ಅಮೀನ್, ವಿರೇಂದ್ರ ಆಚಾರ್ಯ, ರಿತೇಶ್ ಕರ್ಕೇರಾ, ಶಂಕರ ಮೊಗವೀರ ಹಾಗೂ ಪೊಲೀಸ್ ಕಸ್ಟಡಿಯಲ್ಲಿದ್ದ ರಾಜಶೇಖರ ರೆಡ್ಡಿ, ಹರೀಶ್ ರೆಡ್ಡಿ, ರಾಘವೇಂದ್ರ […]
ಕೋಟ ಜೋಡಿ ಕೊಲೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳ ಬಂಧನ. ಬಂಧಿತರ ಸಂಖ್ಯೆ ಹದಿನೈದಕ್ಕೆ
ಕುಂದಾಪುರ: ಕೋಟದ ಮಣೂರು ಗ್ರಾಮದ ಚಿಕ್ಕನಕೆರೆಯಲ್ಲಿ ಇತ್ತೀಚೆಗೆ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ. ಬಂಧಿತರನ್ನು ಮಣೂರು ಚಿಕ್ಕನಕೆರೆ ನಿವಾಸಿ ಚಂದ್ರಶೇಖರ ರೆಡ್ಡಿ (48) ಮತ್ತು ಬ್ರಹ್ಮಗಿರಿ ನಿವಾಸಿ ರತೀಶ್ ಎಮ್ ಕರ್ಕೇರಾ (34) ಎಂದು ಗುರುತಿಸಲಾಗಿದೆ. ಆರೋಪಿ ಚಂದ್ರಶೇಖರ ರೆಡ್ಡಿ ಪಿಕಪ್ ಹೊಂದಿದ್ದು ಚಾಲಕ ವೃತ್ತಿ ಮಾಡಿಕೊಂಡಿದ್ದು, ಈತನು ಕೊಲೆ ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿದ್ದಾನೆ. ಈತನನ್ನು ಫೆ. 14 ರಂದು […]