ರಾಷ್ಟ್ರೀಯ ಹೆದ್ದಾರಿ ಅಸಮರ್ಪಕ ನಿರ್ವಹಣೆ ವಿರುದ್ಧ ನ.28 ರಂದು ಪ್ರತಿಭಟನೆ, ಅನಿರ್ದಿಷ್ಟಾವಧಿ ಮುಷ್ಕರ.

ಕೋಟ: ಇಂಗ್ಲೆಂಡ್ ಮೂಲದ ಕೆ.ಕೆ.ಆರ್ ಕಂಪನಿ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಸಮರ್ಪಕ ನಿರ್ವಹಣೆ ಮತ್ತು ಬೇಜವಾಬ್ದಾರಿ ವಿರುದ್ಧ ನ.28ರಂದು ಚಿತ್ರಪಾಡಿ ಗ್ರಾಮದಲ್ಲಿರುವ ಮಾರಿಗುಡಿ ಬಳಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ರಾ.ಹೆ. ಹೋರಾಟ ಸಮಿತಿ ಅಧ್ಯಕ್ಷ ಶ್ಯಾಮಸುಂದರ್ ನಾಯಿರಿ ಹೇಳಿದರು. ಬೆಳಗ್ಗೆ ಪ್ರತಿಭಟನೆ ಆರಂಭಗೊಳ್ಳಲಿದ್ದು, ಡೋಲು ಬಾರಿಸುವ ಮೂಲಕ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಕೆಕೆಆ‌ರ್ ಜಾಗೃತಿಗೊಳಿಸುವುದು ನಮ್ಮ ಗುರಿ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಹೋರಾಟದಲ್ಲಿ ವಿವಿಧ ಸಂಘಟನೆಗಳು ಮತ್ತು ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಲಿದ್ದು, […]