ಶಾಲಾ ಕಾಲೇಜುಗಳಲ್ಲಿ ಸರಣಿ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
ಕೋಟ: ಶಾಲಾ ಕಾಲೇಜುಗಳಲ್ಲಿನ ಕಳವು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಕೋಟ ಪೊಲೀಸರು ಸೋಮವಾರ ಆವರ್ಸೆ ಗ್ರಾಮದ ಬಳಿಯಿಂದ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ತಮಿಳುನಾಡು ರಾಜ್ಯದ ಸೇಲಂ ನಿವಾಸಿ ಕುಮಾರಸ್ವಾಮಿ(59) ಹಾಗೂ ಪಡುಬಿದ್ರಿ ಹೆಜಮಾಡಿ ಎಸ್.ಎಸ್ ರಸ್ತೆಯ ಜಾಹೀದ್ ಸಿನಾನ್(32) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಬೈಕ್, ಮೊಬೈಲ್ ಹಾಗೂ10,000ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಕಳೆದ 5-6 ತಿಂಗಳಿನಿಂದ ಶಾಲಾ ಕಾಲೇಜುಗಳಿಗೆ ನುಗ್ಗಿ ಹಣ ಹಾಗೂ ಸೊತ್ತುಗಳನ್ನು ಕಳ್ಳತನ ಮಾಡುತ್ತಿರುವ ಬಗ್ಗೆ ಉಡುಪಿ ಜಿಲ್ಲೆಯ ಪ್ರತ್ಯೇಕ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದವು. […]