ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಉಡುಪಿ ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿ ಕೋಟ ರಾಮಕೃಷ್ಣ ಆಚಾರ್ಯ ನೇಮಕ
ಉಡುಪಿ: ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಉಡುಪಿ ಯುವ ಘಟಕದ ಜಿಲ್ಲಾಧ್ಯಕ್ಷರಾಗಿ ಕೋಟ ರಾಮಕೃಷ್ಣ ಆಚಾರ್ಯ ಅವರು ಆಯ್ಕೆಯಾಗಿದ್ದಾರೆ. ಮಹಾಸಭಾದ ಕರಾವಳಿ ಜಿಲ್ಲೆಗಳ ಉಸ್ತುವಾರಿ ಮಾರುತಿ ಬಡಿಗೇರ್ ರಾಯಚೂರು ಮತ್ತು ರಾಜ್ಯ ಯುವ ಘಟಕದ ಅಧ್ಯಕ್ಷ ಮಳವಳ್ಳಿ ಶ್ರೀನಿವಾಸ್ ಅವರ ಶಿಫಾರಸ್ಸಿನಂತೆ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ರಾಜ್ಯಾಧ್ಯಕ್ಷರು ಆಗಿರುವ ವಿಧಾನ ಪರಿಷತ್ ಸದಸ್ಯ ಕೆ.ಪಿ. ನಂಜುಂಡಿ ವಿಶ್ವಕರ್ಮ ಅವರು ಬುಧವಾರ ನೇಮಕ ಮಾಡಿದ್ದಾರೆ. ಸ್ಪೋಟ್ಸ್ ಕನ್ನಡ ವೈಬ್‌ಸೈಟ್ ಸಂಸ್ಥಾಪಕರಾಗಿರುವ ಕ್ರೀಡಾಪಟು ರಾಮಕೃಷ್ಣ ಆಚಾರ್ಯ ಸಮಾಜಸೇವಕರಾಗಿ ಸಕ್ರೀಯರಾಗಿದ್ದಾರೆ.