ಬಿಜೆಪಿ ಕಾಪು ವಿಧಾನಸಭಾ ಕ್ಷೇತ್ರದ ಅಧ್ಯಕ್ಷರ ಪದಗ್ರಹಣ
ಕಾಪು: ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭ ಹಾಗೂ ಕಾಪು ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಮಾವೇಶ ಮಾ. 30 ರಂದು ಕಾಪು K1 ಹೋಟೆಲಿನಲ್ಲಿ ನಡೆಯಿತು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿ ನೂತನ ಪದಾಧಿಕಾರಿಗಳಿಗೆ ಶುಭಹಾರೈಸಿ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ದಾಖಲೆಗಳ ಮತಗಳ ಅಂತರದಲ್ಲಿ ಗೆಲ್ಲಿಸಲು ಕರೆನೀಡಿದರು.