ಮಲ್ಪೆ: ಏ.24 ರಂದು ಉಡುಪಿಗೆ ಯೋಗಿ ಆದಿತ್ಯನಾಥ್

ಮಲ್ಪೆ: ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ(Kota Shrinivas Poojari) ಪರವಾಗಿ ಹಿಂದುತ್ವದ ಬೆಂಕಿ ಚೆಂಡು ಎಂದೇ ಪ್ರಖ್ಯಾತರಾದ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಏ.24 ರಂದು ಸಂಜೆ 4 ಗಂಟೆಗೆ ಮಲ್ಪೆ ಸೀವಾಕ್ ಬಳಿ ಪ್ರಚಾರ ಕಾರ್ಯ ಕೈಗೊಳ್ಳಲಿದ್ದಾರೆ. ಇದಕ್ಕೂ ಮುನ್ನ ತಮಿಳುನಾಡು ಬಿಜೆಪಿ ಮುಖಂಡ ಅಣ್ಣಾಮಲೈ ಏ. 22ರಂದು ಉಡುಪಿ ಹಾಗೂ ಮಂಗಳೂರಿನಲ್ಲಿ ಪ್ರಚಾರ ನಡೆಸಲಿದ್ದಾರೆ. ಎಂದರು.

ಕೋಟ ಶ್ರೀನಿವಾಸ ಪೂಜಾರಿಯವರಿಗೆ ಒಂದೇ ತಿಂಗಳಲ್ಲಿ ಉಚಿತವಾಗಿ ಇಂಗ್ಲಿಷ್ ಕಲಿಸಲು ಮುಂದೆ ಬಂದ ಬೆಳಗಾವಿಯ ಖ್ಯಾತ ಇಂಗ್ಲಿಷ್ ಟ್ರೈನರ್ !

ಬೆಳಗಾವಿ: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿರುವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಒಂದು ತಿಂಗಳಲ್ಲೇ ಇಂಗ್ಲಿಷ್ ಕಲಿಸುವುದಾಗಿ ಬೆಳಗಾವಿಯ ಖ್ಯಾತ ಇಂಗ್ಲಿಷ್ ಟ್ರೈನರ್ ಜಿ.ಎಲ್.ಮಂಜುನಾಥ ತಿಳಿಸಿದ್ದಾರೆ. ಮೂಲತಃ ಹಾಸನದವರಾಗಿರುವ ಬೆಳಗಾವಿಯಲ್ಲಿ ಕಳೆದ 20 ವರ್ಷಗಳಿಂದ ಟೈಮ್ ಇಂಗ್ಲಿಷ್ ಟ್ರೈನಿಂಗ್ ಅಕಾಡೆಮಿ ಮೂಲಕ ವಿದ್ಯಾರ್ಥಿಗಳು, ಉದ್ಯೋಗಾರ್ಥಿಗಳು ಹಾಗೂ ನಾಗರಿಕರಿಗೆ ಇಂಗ್ಲಿಷ್ ಕಲಿಸಿ ಕೊಟ್ಟು ಸಹಸ್ರಾರು ಜನರ ಬಾಳಿಗೆ ಆಶಾಕಿರಣವಾಗಿರುವ ಮಂಜುನಾಥ ಅವರು ಕೋಟ ಶ್ರೀನಿವಾಸ ಪೂಜಾರಿ ಅವರು ಯಾವುದೇ ಕಾರಣಕ್ಕೆ ಭಾಷೆಗಾಗಿ ಭಯಪಡಬೇಕಾಗಿಲ್ಲ, ನಾನು ಅವರಿಗೆ […]

ಜಿ ಎಸ್ ಬಿ ಸಭಾ ಉಡುಪಿ ವತಿಯಿಂದ ಆರ್ಟಿಕಲ್ 370 ಚಲನಚಿತ್ರ ಪ್ರದರ್ಶನ: ಕೋಟ ಶ್ರೀನಿವಾಸ್ ಪೂಜಾರಿ ಭಾಗಿ

ಉಡುಪಿ: ಯೂಥ್ ಆಫ್ ಜಿ ಎಸ್ ಬಿ ಹಾಗೂ ಜಿ ಎಸ್ ಬಿ ಸಭಾ ಉಡುಪಿ ಇದರ ಸಹಯೋಗದಲ್ಲಿ ನಡೆದ ಆರ್ಟಿಕಲ್ 370 ಚಲನಚಿತ್ರದ ಪ್ರದರ್ಶನದಲ್ಲಿ ಉಡುಪಿ – ಚಿಕ್ಕಮಗಳೂರು ಲೋಕ ಸಭಾ ಕ್ಷೇತ್ರದ ಬಿ ಜೆ ಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಭಾಗಿಯಾಗಿ ಶುಭ ಕೋರಿದರು. ಈ ಸಂದರ್ಭ ಸಮಾಜದ ವತಿಯಿಂದ ಅವರನ್ನು ಸ್ವಾಗತಿಸಲಾಯಿತು. ಜಿ ಎಸ್ ಬಿ ಸಮಾಜದ ಹಿರಿಯರಾದ ವಸಂತ್ ಭಟ್, ಗುರುನಾಥ್ ರಾವ್, ಮಟ್ಟಾರ್ ರಮೇಶ್ ಕಿಣಿ, ಮಟ್ಟಾರ್ ಗಣೇಶ್ […]

ಬ್ರಹ್ಮಶ್ರೀ ನಾರಾಯಣ ಗುರುಗಳು ಸಮಬಾಳು-ಸಮಪಾಲು ಪರಿಕಲ್ಪನೆಯ ಹರಿಕಾರ: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ, ಸಮಬಾಳು-ಸಮಪಾಲು ಲಭಿಸಬೇಕೆಂಬ ಪರಿಕಲ್ಪನೆಯೊಂದಿಗೆ ಅಸ್ಪೃಶ್ಯತೆಯನ್ನು ಹೋಗಲಾಡಿಸಲು ಬ್ರಹ್ಮಶ್ರೀ ನಾರಾಯಣ ಗುರು ದೊಡ್ಡ ಕ್ರಾಂತಿಯನ್ನೇ ಶಾಂತಿಮಾರ್ಗದಲ್ಲಿ ರಕ್ತಕ್ರಾಂತಿ ಇಲ್ಲದೇ ಮಾಡುವುದರೊಂದಿಗೆ ಸಮಾಜದಲ್ಲಿ ಸುಧಾರಣೆಯನ್ನು ತಂದಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಗುರುವಾರ ನಗರದ ಬನ್ನಂಜೆ ಶ್ರೀ ನಾರಾಯಣ ಗುರು ಆಡಿಟೋರಿಯಂನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬಿಲ್ಲವರ ಸೇವಾ ಸಂಘ ಉಡುಪಿ (ರಿ) ಬನ್ನಂಜೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಬ್ರಹ್ಮಶ್ರೀ […]

ಫೆ 25-27 ರಂದು ಸಮಾಜ ಕಲ್ಯಾಣ ಇಲಾಖೆ ಸಚಿವರ ಪ್ರವಾಸ ಕಾರ್ಯಕ್ರಮ

ಉಡುಪಿ : ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಫೆಬ್ರವರಿ 25 ಹಾಗೂ 27 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಫೆ. 25 ರಂದು ಬೆಳಗ್ಗೆ 7.30 ರಿಂದ 8.30 ರ ವರೆಗೆ ಕೋಟ ಗೃಹ ಕಚೇರಿಯಲ್ಲಿ ಸಾರ್ವಜನಿಕರ ಭೇಟಿ ಮತ್ತು ಅಹವಾಲು ಸ್ವೀಕಾರ ಕಾರ್ಯಕ್ರಮ, ಬೆ. 10.30 ರಿಂದ ಮ. 12 ರ ವರೆಗೆ ಉಡುಪಿಯ ಸಚಿವರ ಕಚೇರಿಯಲ್ಲಿ ಸಾರ್ವಜನಿಕರ ಭೇಟಿ ಮತ್ತು […]