ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಆಸ್ಪತ್ರೆಗೆ ದಾಖಲು: ಸಾರ್ವಜನಿಕ ಸಂಪರ್ಕಕ್ಕೆ ಅಲಭ್ಯ

ಉಡುಪಿ: ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಅವರು, “ತುರ್ತು ಚಿಕಿತ್ಸೆಗಾಗಿ ನಾನು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರ ಸಲಹೆಯಂತೆ 4-5 ದಿನಗಳ ಕಾಲ ಸಾರ್ವಜನಿಕ ಸಂಪರ್ಕಕ್ಕೆ ಸಿಗುತ್ತಿಲ್ಲ. ಯಾವುದೇ ಕೆಲಸಗಳಿಗಾಗಿ ನನ್ನ ಆಪ್ತ ಸಹಾಯಕರನ್ನು ಮತ್ತು ನನ್ನನ್ನು ದೂರವಾಣಿ ಮೂಲಕ ಸಂಪರ್ಕಿಸಲು ಕೋರುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಪ್ರಶಿಕ್ಷಣ ವರ್ಗ ಉದ್ಘಾಟನೆ

ಮಣಿಪಾಲ:   ನ.14ರಂದು ಮಣಿಪಾಲದ ಶಿವಪಾಡಿ ಶ್ರೀ ಉಮಾ ಮಹೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಪ್ರಶಿಕ್ಷಣ ವರ್ಗವನ್ನು ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಶಾಸಕ ಕೆ.ರಘುಪತಿ ಭಟ್ ರವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. […]

ಮುಂದಿನ ವರ್ಷಾರಂಭದಿಂದಲೆ ಪಡಿತರದಲ್ಲಿ ಕುಚ್ಚಲಕ್ಕಿ ವಿತರಿಸಲು ನಿರ್ಧಾರ: ಕೋಟ ಶ್ರೀನಿವಾಸ ಪೂಜಾರಿ

ಮಂಗಳೂರು: ಮುಂದಿನ ವರ್ಷದ ಜನವರಿ 1 ರಿಂದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪಡಿತರದಲ್ಲಿ ಕುಚ್ಚಲಕ್ಕಿ ವಿತರಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಪಡಿತರ ಮೂಲಕ ಕುಚ್ಚಲಕ್ಕಿಯನ್ನು ನೀಡುವಂತೆ ಕರಾವಳಿಗರು ಬಹು ದಿನಗಳಿಂದ ಬೇಡಿಕೆ ಇಟ್ಟಿದ್ದು, ಇದನ್ನು ಗಮನಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕರಾವಳಿ ಜಿಲ್ಲೆಗಳಲ್ಲಿ ಕುಚ್ಚಲಕ್ಕಿ ವಿತರಣೆಗೆ ಅನುಮತಿ ನೀಡಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿ ಉಡುಪಿ ಭೇಟಿ ಸಂದರ್ಭದಲ್ಲಿ ಈ ಕುರಿತು ಘೋಷಣೆ ಮಾಡಿದ್ದರು. […]

ಸಚಿವ ಅಂಗಾರ ನೇತೃತ್ವದಲ್ಲಿ ಉತ್ತರ ಕನ್ನಡ ಮೀನುಗಾರರ ಸಮಸ್ಯೆಗಳ ಬಗ್ಗೆ ಚರ್ಚೆ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಮೀನುಗಾರರ ಸಮಸ್ಯೆಗಳ ಬಗ್ಗೆ ವಿಧಾನಸೌದದಲ್ಲಿ ಮೀನುಗಾರಿಕಾ ಸಚಿವ ಎಸ್.ಅಂಗಾರ, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರು, ಅಧಿಕಾರಿಗಳು ಮತ್ತು ಮೀನುಗಾರರೊಂದಿಗೆ ಗುರುವಾರದಂದು ಸುಧೀರ್ಘ ಸಭೆ ನಡೆಸಿ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು. ಉತ್ತರ ಕನ್ನಡ ಜಿಲ್ಲೆಯಲ್ಲಿ ಆಳಸಮುದ್ರದಲ್ಲಿ ಮೀನುಗಾರಿಕೆ ಮಾಡುವ ಯಾಂತ್ರಿಕ ದೋಣಿಗಳ ಬೇಡಿಕೆ ಇದ್ದು, 2022-23 ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿರುವಂತೆ ಅರ್ಜಿ ಸಲ್ಲಿಸಿದ ಮೀನುಗಾರರಿಗೆ ಹಣ ಮಂಜೂರು ಮಾಡಬೇಕೆಂಬ ಪ್ರಸ್ತಾಪದ ಬಗ್ಗೆ ಉತ್ತರಿಸಿದ ಸಚಿವ ಅಂಗಾರ, ಇಲಾಖೆಯ […]

ಕಾಂತಾರ ಕಂಡು ಆನಂದಿಸಿದ ಕೋಟ ಶ್ರೀನಿವಾಸ ಪೂಜಾರಿ: ರಿಷಭ್ ಶೆಟ್ಟಿಗೆ ಅಭಿನಂದನೆ ಎಂದ ಸಚಿವರು                                                 

  ಕೋಟ:   ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಇವರು ಗುರುವಾರ ದೈವ ನರ್ತಕರು, ಕಲಾವಿದರು ಹಾಗೂ ದೈವ ಪಾತ್ರಿಗಳ ಜೊತೆಯಲ್ಲಿ ಕಾಂತಾರ ಚಲನಚಿತ್ರವನ್ನು ವೀ ಕ್ಷಿಸಿದರು. ಗಲ್ಲಾ ಪೆಟ್ಟಿಗೆಯನ್ನು ಕೊಳ್ಳೆ ಹೊಡೆಯುತ್ತಿರುವ, ಜನರನ್ನು ಬೇರೆಯದೇ ಲೋಕಕ್ಕೆ ಕೊಂಡೊಯ್ಯುವ ಕರಾವಳಿಯ ಜೀವನಾಡಿಯ ಕಾಂತಾರ ಚಲನಚಿತ್ರವನ್ನು ಕೋಟೇಶ್ವರದ ಭಾರತ್ ಸಿನಿಮಾ ಮಂದಿರದಲ್ಲಿ ಸಚಿವರು ನೋಡಿದರು. ಈ ಸಂದರ್ಭದಲ್ಲಿ ಚಲನಚಿತ್ರ ನೋಡಲು ಆಗಮಿಸಿದ್ದ ದೈವ ನರ್ತಕರನ್ನು ಹಾಗೂ ಚಲನಚಿತ್ರದಲ್ಲಿ ಭಾಗವಹಿಸಿ ಪಾತ್ರ ನಿರ್ವಹಣೆ […]