ಮಾಚೀದೇವರ ಆದರ್ಶಗಳನ್ನು ಅರಿತು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಮಡಿವಾಳ ಮಾಚೀದೇವ ಅವರ ಆದರ್ಶ, ಆಲೋಚನೆ ಮತ್ತು ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರೊಂದಿಗೆ ಅವರು ಯಾವ ಧ್ಯೇಯಕ್ಕಾಗಿ ಸಮಾಜದಲ್ಲಿ ಶ್ರಮಿಸಿದರು ಎಂದು ನಾವು ಅರಿತುಕೊಳ್ಳಬೇಕಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಬುಧವಾರ ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಮಡಿವಾಳ ಮಾಚೀದೇವ ಜಯಂತಿ ಕಾರ್ಯಕ್ರಮದಲ್ಲಿ […]

ಗಂಗಾ ಕಲ್ಯಾಣ ಯೋಜನೆಯಡಿ ಪ.ಜಾತಿ/ ಪ.ಪಂಗಡದ ಕೊಳವೆ ಬಾವಿ ನಿರ್ಮಾಣಕ್ಕೆ ನೇರ ಹಣ ಪಾವತಿ: ಕೋಟ

ಉಡುಪಿ: ಸಮಾಜ ಕಲ್ಯಾಣ ಇಲಾಖೆ, ಅಂಬೇಡ್ಕರ್ ಅಭಿವೃದ್ದಿ ನಿಗಮ ಸೇರಿದಂತೆ 7 ವಿವಿಧ ನಿಗಮಗಳ ಮೂಲಕ ಗಂಗಾ ಕಲ್ಯಾಣ ಯೋಜನೆಯಡಿ ಒಟ್ಟು 17000 ಕೊಳವೆ ಬಾವಿಗಳನ್ನು ಕೊರೆಯಲು ಹಣವನ್ನು ರೈತರ ಖಾತೆಗೆ ನೇರವಾಗಿ ವರ್ಗಾಯಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದರು. ಅವರು ಅನಾರೋಗ್ಯದ ಕಾರಣ ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು ಶುಕ್ರವಾರದಂದು ಅಲ್ಲಿಂದಲೇ ಸಮಾಜ ಕಲ್ಯಾಣ ಇಲಾಖೆಯ ವಿವಿಧ […]

ಪರಿಸರ ಸ್ನೇಹಿ ಗಾಂಧಿ ಭವನಕ್ಕೆ ಕೋಟ ಶ್ರೀನಿವಾಸ್ ಪೂಜಾರಿ ಅವರಿಂದ ಶಂಕುಸ್ಥಾಪನೆ

ಉಡುಪಿ: ಉಡುಪಿಯ ಅಜ್ಜರಕಾಡು ಭುಜಂಗ ಪಾರ್ಕ್ ಬಳಿ ನಿರ್ಮಿಸಲಾಗುತ್ತಿರುವ ಗಾಂಧಿ ಭವನ ಕಟ್ಟಡವು ಪರಿಸರ ಸ್ನೇಹಿಯಾಗಿದ್ದು, ರಾಜ್ಯಕ್ಕೆ ಮಾದರಿಯಾಗುವಂತೆ ನಿರ್ಮಾಣಗೊಳ್ಳಲಿ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಭಾನುವಾರ ಅಜ್ಜರಕಾಡು ಭುಜಂಗಪಾರ್ಕ್ ನಲ್ಲಿ , ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಡುಪಿ ವತಿಯಿಂದ ನಡೆದ ಗಾಂಧಿ ಭವನ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಸಾರ್ವಜನಿಕರಿಗೆ […]

ದೈವಸ್ಥಾನಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ಸಚಿವರಿಗೆ ಮನವಿ

ಕಾರ್ಕಳ: ಯರ್ಲಪಾಡಿ ಗ್ರಾಮ ಪಂಚಾಯತ್ ವತಿಯಿಂದ, ಯರ್ಲಪಾಡಿ ಗ್ರಾಮದ ಜಾರ್ಕಳ, ನೂಜಿಗುಡ್ಡೆ, ಬಾವದಕರೆ ಬ್ರಹ್ಮಮುಗೇರ ದೈವಸ್ಥಾನಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ವಿಶೇಷ ಮನವಿಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ತಾಲೂಕು ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ಪೂಜಾರಿ ಯರ್ಲಪಾಡಿ, ಯರ್ಲಪಾಡಿ ಬಿಜೆಪಿ ಗ್ರಾಮ ಸಮಿತಿ ಪ್ರಧಾನ ಕಾರ್ಯದರ್ಶಿ ಮುಸ್ತಾಫ್ ಜಾರ್ಕಳ ಉಪಸ್ಥಿತರಿದ್ದರು.

ಜೂನ್ 10: ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಜಿಲ್ಲಾ ಪ್ರವಾಸ ಕಾರ್ಯಕ್ರಮ

ಉಡುಪಿ: ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇವರು ಜೂನ್ 10 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಬೆಳಗ್ಗೆ 7.30 ರಿಂದ 8.30 ರ ವರೆಗೆ ಕೋಟ ಗೃಹ ಕಚೇರಿಯಲ್ಲಿ ಸಾರ್ವಜನಿಕರ ಭೇಟಿ ಮತ್ತು ಅಹವಾಲು ಸ್ವೀಕಾರ ಕಾರ್ಯಕ್ರಮ, 9 ಗಂಟೆಗೆ ಕುಂಭಾಶಿಯಲ್ಲಿ ಜಿ.ಎಸ್.ಬಿ ಸೇವಾ ಟ್ರಸ್ಟ್ ನ ಭಜನಾ ಮಂದಿರ ಉದ್ಘಾಟನೆ, 10 ಕ್ಕೆ ಸಾಸ್ತಾನದಲ್ಲಿ ಬಾಳ್ಕುದ್ರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ […]