ನಿಗದಿತ ಕಾಲಮಿತಿಯೊಳಗೆ ಸರ್ಕಾರಿ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಿ: ಕೋಟ ಶ್ರೀನಿವಾಸ್ ಪೂಜಾರಿ

ಉಡುಪಿ: ಪರಿಶಿಷ್ಟ ಜಾತಿ ಮತ್ತು ಪಂಗಡದವರ ಅಭಿವೃದ್ಧಿಗೆ ಸರ್ಕಾರ ಅನೇಕ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಇದನ್ನು ಅರ್ಹ ಫಲಾನುಭವಿಗಳಿಗೆ ನಿಗದಿತ ಕಾಲಮಿತಿಯೊಳಗೆ ತಲುಪಿಸಬೇಕು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾ ಪಂಚಾಯತ್‌ನ ಸಭಾಂಗಣದಲ್ಲಿ ನಡೆದ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ, ಹಿಂದುಳಿದ ವರ್ಗ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರಕಾರ ಪ್ರಸ್ತುತ ಸಾಲಿನಲ್ಲಿ ಆಯವ್ಯಯ ಮೊತ್ತದಲ್ಲಿ […]

ದೇಶದಲ್ಲಿ ಒಂದಲ್ಲ ಒಂದು ದಿನ ಏಕರೂಪ ನಾಗರಿಕ ಸಂಹಿತೆ ಜಾರಿ: ಕೋಟ ಶ್ರೀನಿವಾಸ ಪೂಜಾರಿ

ಕೊಪ್ಪಳ: ಏಕರೂಪ ನಾಗರಿಕ ಸಂಹಿತೆ ಒಂದಲ್ಲ ಒಂದು ದಿನ ದೇಶದಲ್ಲಿ ಜಾರಿಯಾಗಲಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬುಧವಾರ ಹೇಳಿದ್ದಾರೆ. “ಏಕರೂಪ ನಾಗರಿಕ ಸಂಹಿತೆ ತರಲು ಬಿಜೆಪಿ ಬದ್ಧವಾಗಿದೆ ಮತ್ತು ಅದನ್ನು ಜಾರಿಗೆ ತರಲು ಹೊರಟಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿದ್ದು ಬಿಜೆಪಿ”. ಬಿಜೆಪಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲಿದೆ ಎಂದ ಅವರು, “ಕಾನೂನು ಎಲ್ಲ ನಾಗರಿಕರಿಗೂ ಸಮಾನವಾಗಿರಬೇಕು ಎಂಬುದು ಪಕ್ಷದ ನಿಲುವು ಪ್ರಸ್ತುತ ಯಾವುದೇ ಕೋಮು […]

ಸಮಾಜ ಕಲ್ಯಾಣ ಸಚಿವರ ಜಿಲ್ಲಾ ಪ್ರವಾಸ ಕಾರ್ಯಕ್ರಮ

ಉಡುಪಿ: ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮೇ 30 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಬೆಳಗ್ಗೆ 7.30 ರಿಂದ 8.30 ರ ವರೆಗೆ ಕೋಟ ಗೃಹ ಕಚೇರಿಯಲ್ಲಿ ಸಾರ್ವಜನಿಕ ಭೇಟಿ ಮತ್ತು ಅಹವಾಲು ಸ್ವೀಕಾರ ಕಾರ್ಯಕ್ರಮ, ಮಧ್ಯಾಹ್ನ 2.30 ಕ್ಕೆ ಮಣಿಪಾಲದ ಜಿಲ್ಲಾ ಪಂಚಾಯತ್ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ […]

ಸಾಮೂಹಿಕ ಸರಳ ವಿವಾಹ: ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಜಿಲ್ಲೆಯ ಪರಿಶಿಷ್ಟ ಜಾತಿಯ ಯುವಕ ಯುವತಿಯರು ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮದಡಿ ವಿವಾಹವಾದವರಿಗೆ 50,000 ರೂ. ಪ್ರೋತ್ಸಾಹ ಧನ ನೀಡಲಾಗುತ್ತಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಯನ್ನು ಇಲಾಖಾ ವೆಬ್‍ಸೈಟ್ www.sw.kar.nic.in ನಲ್ಲಿ ಸಲ್ಲಿಸಿ, ಸೂಕ್ತ ದಾಖಲೆಯೊಂದಿಗೆ ಒಂದು ವಾರದೊಳಗೆ ಕಚೇರಿಗೆ ನೀಡಬೇಕೆಂದು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ರಜತಾದ್ರಿ ಮಣಿಪಾಲ ದೂರವಾಣಿ ಸಂಖ್ಯೆ: 0820-2574892 ಅನ್ನು ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು […]

ಹೋಟೇಲ್ ಪಾಕಶಾಲ: ನೂತನ ಶಾಖೆ ಉದ್ಘಾಟನೆ

ಕುಂದಾಪುರ: ಕೆ. ಎನ್. ವಾಸುದೇವ ಅಡಿಗರವರ ನೂತನ ಶಾಖೆ ಕುಂಭಾಶಿ, ಕುಂದಾಪುರ “ಪಾಕಶಾಲ” ಹೋಟೆಲ್ ಮತ್ತು ಉಪಹಾರ ಗೃಹದ ಅದ್ದೂರಿ ಉದ್ಘಾಟನ ಸಮಾರಂಭಕ್ಕೆ ಹೃದಯಪೂರ್ವಕ ಆಮಂತ್ರಣ ದಿನಾಂಕ ಮೇ 1, 2022 ಸಂಜೆ 5.00 ಕ್ಕೆ ಮುಖ್ಯ ಅತಿಥಿ: ಶ್ರೀ ಕೋಟ ಶ್ರೀನಿವಾಸ ಪೂಜಾರಿ ಮಾನ್ಯ ಸಚಿವರು, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ಸರ್ಕಾರ ಅತಿಥಿ: ಶ್ರೀ ಹಾಲಾಡಿ ಶ್ರೀನಿವಾಸ ಶೆಟ್ಟಿ ಶಾಸಕರು ಕುಂದಾಪುರ, ಶ್ರೀ ವಿಶ್ವಾಂಭರ ಉಪಾಧ್ಯ ಆನೆಗುಡ್ಡ ದೇವಸ್ಥಾನ ಟ್ರಸ್ಟಿ, ಶ್ರೀ ಆನಂದ್ ಸಿ ಕುಂದರ್ ಜನತಾ […]