ಮಂಗಳೂರು: ಬೀಡಿ ಉದ್ಯಮ ಸೋಮವಾರದಿಂದಲೇ ಪ್ರಾರಂಭ: ಸಚಿವ ಕೋಟ
ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಬೀಡಿ ಉದ್ಯಮ ಪುನರಾರಂಭಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ದ.ಕ. ಜಿಲ್ಲೆಯಲ್ಲಿ 1.90 ಲಕ್ಷ ಹಾಗೂ ಉಡುಪಿ ಜಿಲ್ಲೆಯಲ್ಲಿ 21 ಸಾವಿರದಷ್ಟು ಬೀಡಿ ಕಾರ್ಮಿಕರಿದ್ದಾರೆ. ಕೋರೋನಾ ಹಿನ್ನೆಲೆಯಲ್ಲಿ ಬೀಡಿ ಉದ್ಯಮ ಸಂಪೂರ್ಣ ಸ್ಥಗಿತಗೊಂಡಿದ್ದು, ಬಡವರ ಜೀವನಾಧಾರಕ್ಕೆ ಸಮಸ್ಯೆಯಾಗಿರುವುದು ಸರಕಾರದ ಗಮನಕ್ಕೆ ಬಂದಿದೆ. ಈ ಹಿನ್ನಲೆಯಲ್ಲಿ ಸೋಮವಾರದಿಂದಲೇ ಬೀಡಿ ಉದ್ಯಮ ಪುನರಾರಂಭಗೊಳ್ಳಲಿದೆ. ಕಾರ್ಮಿಕರಿಗೆ ಶೇಕಡಾ 50ರಷ್ಟು ಕೆಲಸ ನೀಡಲು ಮಾಲೀಕರು ಒಪ್ಪಿಕೊಂಡಿದ್ದಾರೆ ಎಂದು […]