ಸಿಎಂ ಯಡಿಯೂರಪ್ಪನವರ ಶೀಘ್ರ ಚೇತರಿಕೆಗೆ ಸಚಿವ ಕೋಟರಿಂದ ಹಾರೈಕೆ
ಉಡುಪಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಯವರಿಗೆ ಕೊರೊನಾ ಪಾಸಿಟಿವ್ ಬಂದಿರುವ ಸುದ್ದಿ ಕೇಳಿ ಮನಸ್ಸಿಗೆ ನೋವಾಗಿದೆ. ಯಾವುದೇ ರೋಗ ಲಕ್ಷಣ ಕಂಡುಬರದಿದ್ದರೂ ಮುಂಜಾಗ್ರತ ದೃಷ್ಟಿಯಿಂದ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆಯನ್ನು ಪಡೆಯಲು ಸಿಎಂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಖ್ಯಮಂತ್ರಿಗಳು ಆದಷ್ಟು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ರಾಜ್ಯದ ಜನತೆಯ ಹಾರೈಕೆ, ಪ್ರಾರ್ಥನೆಗಳು ನಿಮ್ಮೊಂದಿಗಿದೆ. ಶೀಘ್ರದಲ್ಲಿ ಚೇತರಿಸಿಕೊಂಡು ಮತ್ತೆ ಎಂದಿನಂತೆ ಕರ್ತವ್ಯದಲ್ಲಿ ತೊಡಗಿಕೊಳ್ಳುವಂತಾಗಲಿ ಎಂದು ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾರೈಸಿದ್ದಾರೆ.