ಏ.26: “ಸಪ್ತಪದಿ” ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಸಕಲ ಸಿದ್ದತೆ: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ ಫೆ.22: ರಾಜ್ಯಾದ್ಯಂತ ಏಪ್ರಿಲ್ 26 ರಂದು ನಡೆಯುವ ಸಪ್ತಪದಿ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಸಂಬಂದಪಟ್ಟ ಎಲ್ಲಾ ದೇವಾಲಯಗಳಲ್ಲಿ ಎಲ್ಲಾ ವ್ಯವಸ್ಥಿತ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ರಾಜ್ಯದ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಅವರು ಭಾನುವಾರ, ಉಡುಪಿಯ ಪುರ ಭವನದಲ್ಲಿ , ಜಿಲ್ಲಾಡಳಿತ ಮತ್ತು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ಸಹಯೋಗದಲ್ಲಿ ನಡೆದ , ಸಪ್ತಪದಿ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ ಕುರಿತ ವಿಚಾರ ಸಂಕಿರಣ ಕಾರ್ಯಕ್ರಮ ಉದ್ಘಾಟಿಸಿ […]