ತರಕಾರಿ-ದಿನಸಿ ದರ ನಿಯಂತ್ರಣಕ್ಕೆ ಗ್ರಾ.ಪಂ. ಅವಶ್ಯ ಕ್ರಮ ಕೈಗೊಳ್ಳಬೇಕು: ಕೋಟ
ಮಂಗಳೂರು: ದಿನಸಿ ಸಾಮಗ್ರಿ, ತರಕಾರಿ ಹಣ್ಣು ಹಂಪಲುಗಳ ದರ ನಿಯಂತ್ರಣಕ್ಕೆ ಗ್ರಾಮ ಪಂಚಾಯತಿಗಳು ಅವಶ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪುತ್ತೂರು, ಸುಳ್ಯ, ಬೆಳ್ತಂಗಡಿ ತಾಲೂಕುಗಳ ಆಯ್ದ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಪಿಡಿಓ ಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಾತನಾಡಿದರು. ಕೆಲವೆಡೆ ಅಂಗಡಿಗಳಲ್ಲಿ ನಿಗದಿತ ದರಕ್ಕಿಂತ ಜಾಸ್ತಿ ದರ ವಿಧಿಸಿರುವ ಬಗ್ಗೆ ಸಾರ್ವಜನಿಕರ ದೂರುಗಳು ಬರುತ್ತಿವೆ. ಈ […]